ಸಂಗೀತ ನಿರ್ದೇಶಕ ಅರ್ಜುನ್ ಜನ್ಯಗೆ ಕೊರೋನಾ ಸೋಂಕು

ಬೆಂಗಳೂರು, ಏಪ್ರಿಲ್ 09, 2021 (www.justkannada.in):

ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅರ್ಜುನ್ ಜನ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಡವಾಗಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿತು. ನಂತರ ಕೊರೊನಾ ಪರೀಕ್ಷೆ ಮಾಡಿಸಿದಾಗ ವರದಿ ಪಾಸಿಟಿವ್ ಬಂದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ನಾನು ತಕ್ಷಣ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಜನ್ಯ ಹೇಳಿದ್ದಾರೆ.

ಅಂದಹಾಗೆ ಅರ್ಜುನ್ ಜನ್ಯ ಕಳೆದ ವರ್ಷ ಲಘು ಹೃದಯಾಘಾತದಿಂದ ಮೈಸೂರಿನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.