ಮತ್ತೆ ಲಾಕ್ ಡೌನ್ ವಿಚಾರ: ಸಚಿವ ಬೈರತಿ ಬಸವರಾಜು ಪ್ರತಿಕ್ರಿಯಿಸಿದ್ದು ಹೀಗೆ….

ಹಾವೇರಿ,ಜು,4,2020(www.justkannada.in): ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡೋ ಪ್ರಶ್ನೆಯೇ ಇಲ್ಲ. ಎಲ್ಲೆಲ್ಲಿ ಕೇಸ್ ಗಳು ಆಗಿವೆ ಅಲ್ಲಿ ಮಾತ್ರ ಸೀಲ್ ಡೌನ್ ಮಾಡುತ್ತೇವೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಸ್ಪಷ್ಟನೆ ನೀಡಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಸಭಾಂಗಣದಲ್ಲಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಭೈರತಿ ಬಸವರಾಜ್, ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡಲ್ಲ. ಎಲ್ಲೆಲ್ಲಿ ಕೇಸ್ ಗಳು ಆಗಿವೆ ಅಲ್ಲಿ ಮಾತ್ರ ಸೀಲ್ ಡೌನ್ ಮಾಡುತ್ತೇವೆ ಎಂದರು.corona-lock-down-minister-bhairati-basavaraju

ಹಾಗೆಯೇ ಕೋವಿಡ್19 ವಿಚಾರದಲ್ಲಿ ಅವ್ಯವಹಾರ ಆಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ಭೈರತಿ ಬಸವರಾಜ್, ಮಾಜಿ ಸಿಎಂ ಸಿದ್ದರಾಮಯ್ಯನವರ ಆರೋಪ ಅಧಾರರಹಿತವಾಗಿವೆ. ಎಲ್ಲೆಲ್ಲಿ ಏನಾಗಿದೆ ಎಂಬುದು ಇದ್ದರೆ ದಾಖಲೆ ಕೊಡಲಿ, ಟೀಕೆ ಮಾಡಲಿ. ಅದರ ಬಗ್ಗೆ ಸರಕಾರ ಕ್ರಮ ಕೈಗೊಳ್ಳುತ್ತದೆ. ಕೋವಿಡ್19 ನಿಯಂತ್ರಣಕ್ಕೆ ತರೋ ವಿಚಾರದಲ್ಲಿ ನಮ್ಮ ಸರಕಾರ ಹಿಂದೆ ಬಿದ್ದಿಲ್ಲ. ಈಡಿ ದೇಶದಲ್ಲಿ ಕರ್ನಾಟಕ ಸರಕಾರಕ್ಕೆ ಕೋವಿಡ್19 ವಿಚಾರದಲ್ಲಿ ಮೆಚ್ಚುಗೆ ಸಿಕ್ಕಿದೆ. ಕೋವಿಡ್19 ವಿಚಾರದಲ್ಲಿ ವಿರೋಧ ಪಕ್ಷದವರು ಕೆಲಸ ಮಾಡಬೇಕಿತ್ತು. ಸಿದ್ದರಾಮಯ್ಯ ಎಲ್ಲೂ ಹೋಗಿಲ್ಲ, ಮನೆಯಲ್ಲಿ ಕೂತಿದ್ದಾರೆ ಎಂದು ಟೀಕಿಸಿದರು.

Key words: corona-lock down- Minister -Bhairati Basavaraju