ಮಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಇಂದು ಇಬ್ಬರು ಬಲಿ…

ಮಂಗಳೂರು,ಜು,1,2020(www.justkannada.in):  ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಏರಿಕೆ ಜತೆಗೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದ್ದು ಈ ನಡುವೆ ಇಂದು ಮಂಗಳೂರಿನಲ್ಲಿ ಮಹಮಾರಿ ಕೊರೋನಾಗೆ ಇಬ್ಬರು ಬಲಿಯಾಗಿದ್ದಾರೆ.corona-mangalore-two-death-today

ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ 71 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಇವರು ಬೆಂಗ್ರೆ ನಿವಾಸಿಯಾಗಿದ್ದು, ಶುಗರ್ ನ್ಯೂಮೋನಿಯಾದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇನ್ನು ಹಾಗೆಯೇ ಖಾಸಗಿ ಆಸ್ಪತ್ರೆಯಲ್ಲಿ 31 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಈವರೆಗೆ 14 ಮಂದಿ ಸಾವನ್ನಪ್ಪಿದ್ದಾರೆ.

Key words: Corona- Mangalore- Two death-today