ಕೊರೊನಾ ಮೀಟರ್: ದೇಶದಲ್ಲಿ 7,081 ಹೊಸ ಕೊರೊನಾ ಸೋಂಕಿತರು

ಬೆಂಗಳೂರು, ಡಿಸೆಂಬರ್ 19, 2021 (www.justkannada.in): ಕಳೆದ 24 ಗಂಟೆಯಲ್ಲಿ 7,081 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಒಂದೇ ದಿನದಲ್ಲಿ 264 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 477422 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 83913 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 7469 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ ದೇಶದಲ್ಲಿ 12,11,977 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 76,54,466 ಜನರಿಗೆ ಲಸಿಕೆ ನೀಡಲಾಗಿದೆ.