ಕೊರೊನಾ ಮೀಟರ್: ಇಂದು ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ

ಬೆಂಗಳೂರು, ಜನವರಿ 23, 2022 (www.justkannada.in): ಕೇಂದ್ರ ಆರೋಗ್ಯ ಸಚಿವಾಲಯ ಕೋವಿಡ್ ಪ್ರಕರಣ ಬುಲೆಟಿನ್ ಪ್ರಕಟಿಸಿದೆ.

ಶನಿವಾರಕ್ಕೆ ಹೋಲಿಸಿದರೆ ದೇಶದಲ್ಲಿ ದೈನಂದಿನ ಕೋವಿಡ್ ಪ್ರಕರಣಗಳಲ್ಲಿ ಅಲ್ಪ ಇಳಿಕೆ ಕಂಡುಬಂದಿದೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ ಬೆಳಗ್ಗೆ ಕೊನೆಗೊಂಡಂತೆ ಕಳೆದ 24 ತಾಸಿನಲ್ಲಿ ದೇಶದಲ್ಲಿ ಹೊಸದಾಗಿ 3,33,533 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.

ನಿತ್ಯ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದರೂ ಇಂದಿನ ಅಂಕಿಸಂಖ್ಯೆಗಳಲ್ಲಿ ಕೊಂಚ ಇಳಿಕೆ ಕಂಡು ಬಂದಿದೆ.

key words: Corona meter: A slight decrease in the number of infected people today