ಕೊರೊನಾ ಪಾಸಿಟಿವ್: ಟ್ವಿಟ್ಟರ್’ನಲ್ಲಿ ಸ್ಪಷ್ಟಪಡಿಸಿದ ಸಚಿವ ಸಿಟಿ ರವಿ

ಬೆಂಗಳೂರು, ಜುಲೈ 13, 2020 (www.justkannada.in): ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರಿಗೆ ಕೊರೊನಾವೈರಸ್ ಸೋಂಕು ತಗುಲಿದೆ.

ಮುಖ್ಯಮಂತ್ರಿ ಆದಿಯಾಗಿ ಸಚಿವರು, ಸಂಸದರು, ಶಾಸಕರನ್ನೂ ಬೆನ್ನು ಬಿಡದೇ ಕಾಡುತ್ತಿದೆ ಕೊರೊನಾ ವೈರಸ್ ಕಾಡುತ್ತಿದೆ. ಭಾನುವಾರ ನಡೆಸಿದ ತಪಾಸಣೆ ಸಂದರ್ಭದಲ್ಲಿ ಸಚಿವರಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ.

ಈ ಕುರಿತು ಸ್ವತಃ ಸಚಿವ ಸಿ.ಟಿ.ರವಿ ಅವರು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ನಿನ್ನೆ ನಾನು, ಮಡದಿ ಪಲ್ಲವಿ, ನನ್ನ ಸಿಬ್ಬಂದಿ ವರ್ಗ ಕೋವಿಡ್19 ಪರೀಕ್ಷೆಗೆ ಒಳಪಟ್ಟಿದ್ದೆವು. ಪಲ್ಲವಿ ಹಾಗೂ ನನ್ನ ಗನ್-ಮ್ಯಾನ್, ಚಾಲಕ ಸೇರಿ ಆಫೀಸ್ ಸಿಬ್ಬಂದಿ ಎಲ್ಲರದು ನೆಗೆಟಿವ್ ಬಂದಿದೆ ಎಂದು ಟ್ವೀಟ್ ಮಾಡಿದ್ದಾರೆ.