ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಕೊರೋನಾ ಪಾಸಿಟಿವ್ …

ಬೆಂಗಳೂರು, ಆಗಸ್ಟ್, 18, 2020(www.justkannada.in): ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಗೆ ಕೊರೊನಾ ಸೋಂಕು ತಗುಲಿದ್ದು, ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.jk-logo-justkannada-logo

ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳವಾರ ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಹೀಗಾಗಿ, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿದ್ದವರು ಕೊರೋನಾ ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಡಿ,ಜೆ.ಹಳ್ಳಿ, ಕೆ.ಜಿ ಹಳ್ಳಿ ಗಲಭೆ ಬಳಿಕ ಹಲವೆಡೆ ಓಡಾಟ : ಗಲಭೆಯ ಬಳಿಕ ಜಮೀರ್ ಅಹ್ಮದ್ ನಗರದ ಹಲವೆಡೆ ಸುತ್ತಾಡಿದ್ದರು. ಮೌಲ್ವಿಗಳ ಜೊತೆ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಭೇಟಿ ನೀಡಿದ್ದರು. ಅಷ್ಟೇ ಅಲ್ಲದೇ ಪೊಲೀಸರ ಗುಂಡೇಟಿಗೆ ಬಲಿಯಾದವರ ಮನೆಗೆ ಹೋಗಿ ಸಾಂತ್ವನ ಹೇಳಿದ್ದರು.

key words: Corona- Positive – MLA- Jameer Ahmed Khan.