ದ್ವಿತೀಯ ಪಿಯು ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್…?

ಬೆಂಗಳೂರು,ಜೂ,19,2020(www.justkannada.in):  ಮಾರಣಾಂತಿಕ ಕೊರೋನಾ ವೈರಸ್ ಆತಂಕದ ನಡುವೆ ನಿನ್ನೆ ರಾಜ್ಯದಲ್ಲಿ ಪಿಯು ಕೊನೆಯ ಇಂಗ್ಲೀಷ್ ಪರೀಕ್ಷೆ  ನಡೆದಿದ್ದು ಈ ನಡುವೆ ಪರೀಕ್ಷೆ ಬರೆದ ವಿದ್ಯಾರ್ಥಿಯೋರ್ವಳಿಗೆ ಕೊರೋನಾ ಸೋಂಕು ಇರುವ ಶಂಕೆ ವ್ಯಕ್ತವಾಗಿದೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ನಿನ್ನೆ ಬೆಂಗಳೂರಿನಲ್ಲಿ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೊನಾ ವೈರಸ್ ಇರುವುದು ಪತ್ತೆಯಾಗಿದೆ. ಬೆಂಗಳೂರಿನ ಜಯನಗರ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದರು.corona-positive-student-second-pu-exam-yesterday

ವಿದ್ಯಾರ್ಥಿನಿ ಹೋಂ ಕ್ವಾರಂಟೈನ್‌ ನಲ್ಲಿದ್ದರೂ ಸಹ ಅಧಿಕಾರಿಗಳ ಕಣ್ತಪ್ಪಿಸಿ ಪರೀಕ್ಷೆ ಬರೆದಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಪರೀಕ್ಷೆ ಬರೆದ ಕೊಠಡಿಯಲ್ಲಿ ಇನ್ನೂ 14 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದೀಗ ಅಧಿಕಾರಿಗಳು ಈ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ.

Key words: Corona positive – student – second PU exam- yesterday.