ಪರೀಕ್ಷೆ ಬರೆದ ಕೊರೋನಾ ಪಾಸಿಟಿವ್ ವಿದ್ಯಾರ್ಥಿನಿ…

ಮೈಸೂರು,ನವೆಂಬರ್,7,2020(www.justkannada.in): ಮೈಸೂರು ವಿಶ್ವ ವಿದ್ಯಾನಿಲಯದ ಸ್ನಾತಕೋತ್ತರ ಪ್ರವೇಶಾತಿಗೆ ಪರೀಕ್ಷೆ ನಡೆಯುತ್ತಿದ್ದು, ಈ ಮಧ್ಯೆ ಕೊರೋನಾ ಪಾಸಿಟಿವ್ ವಿದ್ಯಾರ್ಥಿನಿ ಪಿಪಿಇ ಕಿಟ್ ಧರಿಸಿ ಪರೀಕ್ಷೆ ಬರೆದಿದ್ದಾರೆ. jk-logo-justkannada-logo

ಮೈಸೂರು ವಿವಿಯಲ್ಲಿ ಸ್ನಾತಕೋತ್ತರ ಪ್ರವೇಶಾತಿಗೆ ಪರೀಕ್ಷೆಗಳು ನಡೆಯುತ್ತಿದ್ದು, ಜೀವ ವಿಜ್ಞಾನ ವಿಷಯದ ಕುರಿತಾಗಿ ಕೊರೋನಾ ಪಾಸಿಟಿವ್ ವಿದ್ಯಾರ್ಥಿನಿ ಪರೀಕ್ಷೆ ಬರೆದಿದ್ದಾರೆ.

ಮಾನಸಗಂಗೋತ್ರಿಯ ಸಂಸ್ಕೃತ ಅಧ್ಯಯನ ವಿಭಾಗದಲ್ಲಿ ಸಿಇಟಿ ಪರೀಕ್ಷೆ ನಡೆಯುತ್ತಿದ್ದು, ಕೋವಿಡ್ -19 ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ  ಮಾಡಿ ಪ್ರತ್ಯೇಕ ಮೇಲ್ವಿಚಾರಕರನ್ನು ನಿಯೋಜಿಸಲಾಗಿತ್ತು. ಈ ಮೂಲಕ  ಮೈಸೂರು ವಿವಿ ಆಡಳಿತ ಮಂಡಳಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಕೊರೋನಾ ಪಾಸಿಟಿವ್ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಟ್ಟಿತು.

Key words: Corona Positive- Student –wrote- CET Exam – Mysore university