ಪ್ರಧಾನಿ ಮೋದಿ ಇಂದು ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆ- ಸಭೆಗೂ ಮುನ್ನ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ…

ಬೆಂಗಳೂರು,ನವೆಂಬರ್,24,2020(www.justkannada.in):  ದೇಶದಲ್ಲಿ ಹರಡುತ್ತಿರುವ ಕೊರೊನಾ ಮಹಾಮಾರಿ ಕುರಿತು ಇಂದು ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳ ಸಿಎಂಗಳ ಜತೆ ಸಭೆ ನಡೆಸಲಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ, ಪ್ರಧಾನಿ ಮೋದಿ ಇಂದು ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ.kannada-journalist-media-fourth-estate-under-loss

ಸಭೆಗೂ ಮುನ್ನ ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಿಎಂ ಬಿಎಸ್ ಯಡಿಯೂರಪ್ಪ, ಇವತ್ತಿನ ಸಭೆಯಲ್ಲಿ ಎಲ್ಲವೂ ಚರ್ಚೆಯಾಗಲಿದೆ. ಕೊರೋನಾ ಸಂಕಷ್ಟದಲ್ಲಿರುವವರಿಗೆ ಸವಲತ್ತು ನೀಡಬೇಕು. ಎಲ್ಲಾ ವಿಚಾರಗಳ ಬಗ್ಗೆ ಚರ್ಚಿಸಲು ಪ್ರಧಾನಿ ಮೋದಿ ಸಭೆ ಕರೆದಿದ್ದಾರೆ. ಹೀಗಾಗಿ ಇಂದು ಪ್ರಧಾನಿ ಮೋದಿ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳಬಹುದು ಎಂದರು. corona- Prime Minister -Modi -expected - historic decision –today-CM BS Yeddyurappa

ಈಗಾಗಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊರೋನಾ ಹೆಚ್ಚಳವಾಗಿರುವ 8 ರಾಜ್ಯಗಳ ಜತೆ ಪ್ರಧಾನಿ ಮೋದಿ ಸಭೆ ಆರಂಭವಾಗಿದೆ. ಮಹಾರಾಷ್ಟ್ರ, ಹರಿಯಾಣ, ರಾಜಸ್ತಾನ ಸೇರಿ 8 ರಾಜ್ಯಗಳ ಸಿಎಂಗಳ ಜತೆ ಪ್ರಧಾನಿ ಮೋದಿ ಸಭೆ ನಡೆಸುತ್ತಿದ್ದಾರೆ.

Key words: corona- Prime Minister -Modi -expected – historic decision –today-CM BS Yeddyurappa