ನಮಗೂ ಕೊರೋನಾ ಪರಿಹಾರ ನೀಡಿ: ಸರ್ಕಾರಕ್ಕೆ ಒತ್ತಾಯಿಸಿ ಖಾಸಗಿ ಶಾಲಾ ಕಾಲೇಜು ಶಿಕ್ಷಕರು, ಉಪನ್ಯಾಸಕರಿಂದ ಪ್ರತಿಭಟನೆ….

ಮೈಸೂರು,ಜೂ,30,2020(www.justkannada.in): ಕೋವಿಡ್-19 ಪರಿಸ್ಥಿತಿಯಿಂದಾಗಿ ಖಾಸಗಿ ಶಾಲಾ ಕಾಲೇಜು ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಸಹ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ನಮಗೂ ಕೊರೋನಾ ಪರಿಹಾರ ನೀಡಿ ಎಂದು  ಖಾಸಗಿ ಶಾಲಾ ಕಾಲೇಜು ಶಿಕ್ಷಕರು ಹಾಗೂ ಉಪನ್ಯಾಸಕರು ಪ್ರತಿಭಟನೆ ನಡೆಸಿದರು.

ಮೈಸೂರು ಜಿಲ್ಲಾಧಿಕಾರಿಗಳ ಕಛೇರಿ ಎದುರು  ಖಾಸಗಿ ಶಾಲಾ ಕಾಲೇಜು ಶಿಕ್ಷಕರು ಹಾಗೂ ಉಪನ್ಯಾಸಕರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಕೋವಿಡ್-19 ಪರಿಸ್ಥಿತಿಯಿಂದ ಖಾಸಗಿ ಶಾಲಾ ಕಾಲೇಜು ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಬೀದಿ ಪಾಲಾಗಿದ್ದಾರೆ. ಲಾಕ್ಡೌನ್ ನಿಂದ ಕೆಲಸವಿಲ್ಲದೆ ಸಂಕಷ್ಟಕ್ಕೊಳಗಾಗಿದ್ದಾರೆ. ಕೂಡಲೇ ಸರ್ಕಾರ ಶಿಕ್ಷಕ ವರ್ಗಕ್ಕೂ  ಪರಿಹಾರ ನೀಡಬೇಕು. ಖಾಸಗಿ ಶಿಕ್ಷಕ ಮತ್ತು ಶಿಕ್ಷಕೇತರ ಕುಟುಂಬಗಳಿಗೆ ಕೋವಿಡ್ ತಗುಲಿದರೆ ಸಂಪೂರ್ಣ ಉಚಿತ ಚಿಕಿತ್ಸೆ ನೀಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.corona-relief-fund-protest-private-school-college-teachers-mysore

ಟೀಚರ್ ವೆಲ್ಫೆರ್ ಫಂಡ್ ಕಲ್ಯಾಣ ನಿಧಿಯನ್ನು ಬಳಸಿಕೊಳ್ಳುವುದರ ಮೂಲಕ ಪರಿಹಾರ ನೀಡಬೇಕು. ಆರ್ ಟಿಐ ಯೋಜನೆಗೆ ಒಳಪಡದ ಖಾಸಗಿ ಶಾಲಾ ಕಾಲೇಜು ಮತ್ತು ಪದವಿ ಕಾಲೇಜುಗಳ ಶಿಕ್ಷಕ  ಪರಿಹಾರ ನೀಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

Key words: corona- relief fund- Protest – private school -college –teachers-mysore