ರಾಜ್ಯದಲ್ಲಿ ಕೊರೋನಾ ಭೀತಿ ಹಿನ್ನೆಲೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಿಂದ ತುರ್ತುಸಭೆ.

ಬೆಂಗಳೂರು,ಡಿಸೆಂಬರ್,16,2023(www.justkannada.in): ಕೇರಳದಲ್ಲಿ ಕೋವಿಡ್ ಹೆಚ್ಚಳವಾಗಿದ್ದು ಇದೀಗ ಕರ್ನಾಟಕಕ್ಕೂ ಕೊರೋನಾ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವ ಕುರಿತು ಚರ್ಚಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ ಕರೆದಿದ್ದಾರೆ.

ವಿಕಾಸಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತುರ್ತು ಸಭೆ ನಡೆಸುತ್ತಿದ್ದು,  ಆರೋಗ್ಯ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದಾರೆ. ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲಾಗುತ್ತಿದೆ.

ಸಬ್ ವೆರಿಯೆಂಟ್ ‘ಹರಡದಂತೆ ಪಾಲಿಸಬೇಕಾದ ಕ್ರಮಗಳು , ಜನರಿಗೆ ಹೇಗೆ ಜಾಗೃತಿ ಮೂಡಿಸಬೇಕು. ರಾಜ್ಯದಲ್ಲಿ ಆರೋಗ್ಯ ಇಲಾಖೆ ಯಾವ ರೀತಿ ಸಜ್ಜಾಗಬೇಕು ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗುತ್ತಿದೆ ಎನ್ನಲಾಗಿದೆ.

Key words: Corona scare – state-Emergency meeting -Health Minister- Dinesh Gundurao.