ಸಿಎಂ ತವರು ‘ಗ್ರೀನ್ ಝೋನ್’ ಶಿವಮೊಗ್ಗಕ್ಕೂ ಕಾಲಿಟ್ಟ ಕೊರೊನಾ

ಶಿವಮೊಗ್ಗ, ಮೇ 10, 2020 (www.justkannada.in):  ಹಸಿರು ವಲಯವಾಗಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಈ ಕುರಿತು ಮಾಹಿತಿ ನೀಡಿದ್ದು, 8 ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. ಜಿಲ್ಲಾಡಳಿತದ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರು ನೋವು ಮಾಡಿಕೊಳ್ಳುವುದು ಬೇಡ. ಜಿಲ್ಲೆಯ ಜನ ಅವರೊಂದಿಗೆ ಇದ್ದಾರೆ ಎಂದು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ 8 ಕೊರೋನಾ ಪಾಸಿಟಿವ್ ಪ್ರಕರಣ ದೃಢಪಟ್ಟಿದೆ ಎಂದು ಹೇಳಿದ್ದಾರೆ.

ಕೊರೋನಾ ಪಾಸಿಟಿವ್ ಬಂದಿರುವ 8 ಮಂದಿ ಸಿಎಂ ಯಡಿಯೂರಪ್ಪ ಪ್ರತಿನಿಧಿಸುವ ಶಿಕಾರಿಪುರ ಕ್ಷೇತ್ರದವರಾಗಿದ್ದು, ಇವರೆಲ್ಲಾ ಅಹಮದಾಬಾದ್ ನಿಂದ ಬಂದವರಾಗಿದ್ದಾರೆ.