ಆನ್ ಲಾಕ್: ಮೊದಲ ದಿನ ಬಸ್ ಸಂಚಾರಕ್ಕೆ ಸ್ವಲ್ಪ ತೊಂದರೆಯಾಗುತ್ತೆ – ಡಿಸಿಎಂ ಲಕ್ಷ್ಮಣ್ ಸವದಿ.

ಬೆಂಗಳೂರು,ಜೂನ್,21,2021(www.justkannada.in): ರಾಜ್ಯದಲ್ಲಿ ಕೊರೊನಾ ಇಳಿಮುಖವಾದ ಹಿನ್ನೆಲೆ ಅನ್ ಲಾಕ್ ಮಾಡಲಾಗಿದ್ದು ಮೈಸೂರು ಜಿಲ್ಲೆ ಹೊರತುಪಡಿಸಿ ಎಲ್ಲಾ ಕಡೆಗಳಲ್ಲಿ ಬಸ್ ಸಂಚಾರ ಆರಂಭವಾಗಿದೆ. ಈ ಮಧ್ಯೆ ಮೊದಲ ದಿನ ಬಸ್ ಸಂಚಾರಕ್ಕೆ ಸ್ವಲ್ಪ ತೊಂದರೆಯಾಗುತ್ತದೆ ಎಂದು ಸಾರಿಗೆ ಸಚಿವರೂ ಆದ ಡಿಸಿಎಂ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.jk

ಬಸ್ ಸಂಚಾರ ಆರಂಭ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಮಧ್ಯಾಹ್ನದ ಬಳಿಕ ಎಲ್ಲಾ ಕಡೆಗಳಲ್ಲಿ ಬಸ್ ಸಂಚಾರ ಆರಂಭವಾಗುತ್ತದೆ. ನಾಳೆಯಿಂದ ಯಾವುದೇ ರೀತಿಯ ಸಮಸ್ಯೆ ಇರುವುದಿಲ್ಲ. ಸಮಸ್ಯೆ ಬಗೆಹರಿಸಲು ಅಧಿಕಾರಿಗಳ ಜತೆ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಇನ್ನು ಶೇ.90 ರಷ್ಟು ಸಾರಿಗೆ ಸಿಬ್ಬಂದಿಗೆ ಕೊರೋನಾ ವ್ಯಾಕ್ಸಿನ್ ಹಾಕಲಾಗಿದೆ. ಕೊರೋನಾ ವ್ಯಾಕ್ಸಿನ್ ಹಾಕಲು ನೋಡಲ್ ಅಧಿಕಾರಿಗಳನ್ನ ನೇಮಕ ಮಾಡಲಾಗಿದೆ ಎಂದು ಲಕ್ಷ್ಮಣ್ ಸವದಿ ತಿಳಿಸಿದರು.

ರಾಜ್ಯದಲ್ಲಿ ಅನ್ ಲಾಕ್ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ಬಸ್ ಸಂಚಾರ ಆರಂಭವಾಗಿದೆ. ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ಬಸ್ ಗಳಿಗಾಗಿ ಜನರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

Key words: corona- unlock-bus- DCM- Laxman Saudi