ಬೆಂಗಳೂರಿನಲ್ಲಿ ಮತ್ತೊಬ್ಬರಲ್ಲಿ ಕೊರೋನಾ ಸೋಂಕು…

ಬೆಂಗಳೂರು,ಮಾ,12,2020(www.justkannada.in):  ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಮತ್ತೊಬ್ಬರಲ್ಲಿ ಕೊರೋನಾ ಸೋಂಕು ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಗ್ರೀಸ್ ನಿಂದ ಬಂದಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢವಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ವಿದೇಶದಿಂದ ಬಂದಿದ್ದ ಟೆಕ್ಕಿಯೊಬ್ಬರಿಗೆ ಕೊರೋನಾ ಸೋಂಕು ಪತ್ತೆಯಾಗಿತ್ತು. ನಂತರ ಟೆಕ್ಕಿಯ ಪತ್ನಿ ಮಗು ಹಾಗೂ ಸಹದ್ಯೋಗಿಗೆ ಕೊರೋನಾ ಸೋಂಕು ಇರುವುದು ದೃಢವಾಗಿತ್ತು.

ಇದೀಗ ಗ್ರೀಸ್ ನಿಂದ ಬಂದ ವ್ಯಕ್ತಿಯೊಬ್ಬರಲ್ಲಿ ಕೊರೋನಾ ಸೋಂಕಿದ್ದು ಇವರ ಜತೆಗಿದ್ದ ಎಲ್ಲರನ್ನೂ ಗುರುತಿಸಿ ಪ್ರಾಥಮಿಕ ಪರೀಕ್ಷೆ ಮಾಡಲಾಗಿದೆ. ಜತೆಗಿದ್ದವರಿಗೆ ನೆಗೆಟಿವ್ ಬಂದಿದೆ ಎಂದು ಹೇಳಲಾಗುತ್ತಿದೆ.

Key words: Corona virus- infection – Bengaluru – another-person