ಕೊರೋನಾ ಸೋಂಕು ಭೀತಿ ಹಿನ್ನೆಲೆ:  ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಬಿಎಸ್ ವೈ…

ಬೆಂಗಳೂರು,ಮಾ,18,2020(www.justkannada.in):  ಪ್ರಪಂಚದಾದ್ಯಂತ ಭಾರಿ ಆತಂಕ ಸೃಷ್ಠಿಸಿರುವ ಕೊರೋನಾ ವೈರಸ್ ಭೀತಿ ರಾಜ್ಯದಲ್ಲಿ ಹೆಚ್ಚಾಗುತ್ತಿದ್ದು ಈ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಮಧ್ಯಾಹ್ನಕ್ಕೆ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆ ಮಧ್ಯಾಹ್ನ 1.30ಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ. ವಿಧಾನಸೌಧದಲ್ಲಿ ತುರ್ತು ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಕೊರೋನಾ ವೈರಸ್ ಹರಡದಂತೆ ತಡೆಗಟ್ಟುವ ಕುರಿತು ಮತ್ತಷ್ಟು  ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಹಾಗೆಯೇ ಒಂದು ವಾರ ಬಂದ್ ಮುಂದುವರೆಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಒಂದು ವಾರಗಳ ಕಾಲ ರಾಜ್ಯದಲ್ಲಿ ಥಿಯೇಟರ್, ಮಾಲ್ ಗಳು, ಶಾಲಾಕಾಲೇಜುಗಳನ್ನ ಬಂದ್ ಮಾಡಲಾಗಿದೆ. ಇದನ್ನೇ ಮುಂದುವರೆಸುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

Key words: corona virus- infection- CM BS Yeddyurappa- – Emergency- Cabinet Meeting