Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಬೇರೆಯವರ ಹೆಂಡತಿಯರ ಲೆಕ್ಕವನ್ನು ಚೆನ್ನಾಗಿ ಹಾಕುವ ನೀವು ಕರೋನಾ ಸಾವಿನ ಲೆಕ್ಕದಲ್ಲಿ ತಪ್ಪುವುದೇಕೆ..? ರಾಜ್ಯ ಕಾಂಗ್ರೆಸ್...

ಬೇರೆಯವರ ಹೆಂಡತಿಯರ ಲೆಕ್ಕವನ್ನು ಚೆನ್ನಾಗಿ ಹಾಕುವ ನೀವು ಕರೋನಾ ಸಾವಿನ ಲೆಕ್ಕದಲ್ಲಿ ತಪ್ಪುವುದೇಕೆ..? ರಾಜ್ಯ ಕಾಂಗ್ರೆಸ್ ಟೀಕೆ…

ಬೆಂಗಳೂರು,ಏಪ್ರಿಲ್,30,2021(www.justkannada.in): ಕೊರೋನಾ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪದೇ ಪದೇ ಟ್ವಿಟ್ಟರ್ ನಲ್ಲಿ ವಾಗ್ದಾಳಿ ನಡೆಸುತ್ತಿರುವ ರಾಜ್ಯ ಕಾಂಗ್ರೆಸ್ ಇದೀಗ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಗೆ ಟಾಂಗ್ ನೀಡಿದೆ.Corona's- death –number- miss- State Congress –minister -sudhakar

ಸಚಿವ ಡಾ.ಕೆ ಸುಧಾಕರ್  ವಿರುದ್ಧ ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್,  ಸಚಿವ ಸುಧಾಕರ್ ಅವರೇ, ಬೇರೆಯವರ ಹೆಂಡತಿಯರ ಲೆಕ್ಕವನ್ನು ಚೆನ್ನಾಗಿ ಹಾಕುವ ನೀವು ಕರೋನಾ ಸಾವಿನ ಲೆಕ್ಕದಲ್ಲಿ ತಪ್ಪುವುದೇಕೆ!? ಎಂದು ಪ್ರಶ್ನಿಸಿದೆ.

ಆಸ್ಪತ್ರೆಗಳಲ್ಲಿ ಹೆಣಗಳ ರಾಶಿ, ಸ್ಮಶಾನಗಳಲ್ಲಿ ಶವಗಳ ಸಾಲು, ಮಾಧ್ಯಮಗಳಲ್ಲಿ ಸಾವಿರ ಸಾವಿನ ಸುದ್ದಿಗಳು, ಆದರೆ ಸರ್ಕಾರ ವೈಫಲ್ಯ ಮುಚ್ಚಲು ಸಾವಿನ ಲೆಕ್ಕ ಮುಚ್ಚಿಡುತ್ತಿದೆ. ಮೋದಿಯ ಚಾಳಿ ಮುಂದುವರೆಸಿದೆ ಎಂಬುದಾಗಿ ಕಾಂಗ್ರೆಸ್ ಟ್ವಿಟ್ಟರ್ ನಲ್ಲಿ ಟೀಕಿಸಿದೆ.Corona's- death –number- miss- State Congress –minister -sudhakar

‘ಜನರ ಜೀವನಕ್ಕೆ ಮಣ್ಣು, ಜೀವಕ್ಕೆ ಬೆಂಕಿ’ ಇದೇ ಈ ಸರ್ಕಾರದ ಸಾಧನೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ ಹಸಿವು ಕೊಲ್ಲುತ್ತಿದೆ ಕೂಡಲೇ ಅನ್ನಭಾಗ್ಯದ ಅಕ್ಕಿ 10 ಕೆಜಿಗೆ ಏರಿಸಿ, ಇಲ್ಲದೆ ಹೋದಲ್ಲಿ ಸೋಂಕಿತರ ಸಾವುಗಳೊಂದಿಗೆ ಹಸಿದವರ ಸಾವೂ ಸೇರಲಿದೆ, ನಿಮ್ಮ ಮಸಣಗಳು ಸಾಲುವುದಿಲ್ಲ. ಈ ಮನಕಲುಕುವ ಘಟನೆ ಕಂಡೂ ಸುಮ್ಮನಿದ್ದರೆ ಕ್ಷಮೆ ಇರುವುದಿಲ್ಲ ಎಂದಿದೆ.

Key words: Corona’s- death –number- miss- State Congress –minister -sudhakar