ದೇಶದಲ್ಲಿ 18 ಲಕ್ಷ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ…

ನವದೆಹಲಿ, ಆ,3,2020(www.justkannada.in):  ಭಾರತದಲ್ಲಿ  ಕೊರೋನ ಪಾಸಿಟಿವ್ ಪ್ರಕರಣ ದಿನೇ ದಿನೇ ಹೆಚ್ಚುತ್ತಿದ್ದು ಈ ನಡುವೆ ಕೊರೋನಾ ಸೋಂಕಿತರ ಸಂಖ್ಯೆ 18 ಲಕ್ಷ ಗಡಿ ದಾಟಿದೆ.jk-logo-justkannada-logo

ದೇಶದಲ್ಲಿ ಒಂದೇ ದಿನ 52,972 ಮಂದಿಗೆ ಕೊರೊನಾ ವೈರಸ್ ತಗುಲಿದೆ. ಈ ಮೂಲಕ ದೇಶದಲ್ಲಿ ಒಟ್ಟು ಕೊವಿಡ್ ಸೋಂಕಿತರ ಸಂಖ್ಯೆ 18,03,696ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 771 ಜನರು ಕೊರೊನಾ  ಸೋಂಕಿನಿಂದ ಬಲಿಯಾಗಿದ್ದು, ಈ ಮೂಲಕ ಕೊರೋನಾಗೆ ಮೃತಪಟ್ಟವರ ಸಂಖ್ಯೆ 38,135ಕ್ಕೆ ಏರಿಕೆಯಾಗಿದೆ.coronavirus-18-lakh-borders-country

ಇನ್ನು18,03,696 ಸೋಂಕಿತರ ಪೈಕಿ  11, 86,203 ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 5,79,357  ಕೊರೋನಾ ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಅತಿ ಹೆಚ್ಚು ಕೊವಿಡ್ ಸಾವು ಹೊಂದಿರುವ ಪಟ್ಟಿಯಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದೆ.

Key words: coronavirus – 18 lakh -borders – country.