ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗೆ ಕೊರೋನಾ ಸೋಂಕು ದೃಢ…

ಹಾಸನ,ಜೂ,27,2020(www.justkannada.in):  ಹಾಸನ ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ  ಪರೀಕ್ಷೆ ಬರೆದ ವಿದ್ಯಾರ್ಥಿಗೆ ಕೊರೋನಾ ಸೋಂಕಿರುವುದು ಕಂಡು ಬಂದಿದೆ.

ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ  ಮಲ್ಲಿಪಟ್ಟಣ ಗ್ರಾಮದ ಪರೀಕ್ಷಾ ಕೇಂದ್ರದಲ್ಲಿ ಇಂದು ಗಣಿತ ಪರೀಕ್ಷೆ ಬರೆದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗೆ ಸೋಂಕಿರುವುದು ದೃಢವಾಗಿದೆ. ವಿದ್ಯಾರ್ಥಿಯ ಗಂಟಲು ದ್ರವವನ್ನ ಪರೀಕ್ಷೆಗೆ ಕಳುಹಿಸಲಾಗಿತ್ತು. ಆದರೆ ವರದಿ ಬರುವ ಮುನ್ನವೇ ವಿದ್ಯಾರ್ಥಿ ಗಣಿತ ಪರೀಕ್ಷೆಗೆ ಹಾಜರಾಗಿದ್ದು ಇದೀಗ ಇತರೇ ವಿದ್ಯಾರ್ಥಿಗಳಲ್ಲಿ ಆತಂಕ ಶುರುವಾಗಿದೆ.coronavirus-confirmed-sslc-student

ಈ ಕುರಿತು ಮಾಹಿತಿ ನೀಡಿರುವ ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್, ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣ ಗ್ರಾಮದ ಪರೀಕ್ಷಾ ಕೇಂದ್ರದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಸೋಂಕಿತ ವಿದ್ಯಾರ್ಥಿ  ಜತೆ ಪರೀಕ್ಷೆ ಬರೆದ 18 ವಿದ್ಯಾರ್ಥಿಗಳು ಕೊಠಡಿ ಸಿಬ್ಬಂದಿ ಪ್ರತ್ಯೇಕವಾಗಿರಲು ಸೂಚನೆ ನೀಡಲಾಗಿದೆ. ಈ ವಿದ್ಯಾರ್ಥಿಗಳು ಪರೀಕ್ಷೆ ಮುಂದುವರೆಸಬೇಕೆ ಎಂಬುದನ್ನ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಬಿಟ್ಟಿದ್ದೇವೆ. ಸೋಂಕಿತ ವಿದ್ಯಾರ್ಥಿ ಪರೀಕ್ಷೆ ಬರೆಯಲು ಅವಕಾಶವಿಲ್ಲ.  ವಿದ್ಯಾರ್ಥಿಯ ಸಂಪರ್ಕದಲ್ಲಿರುವವರ ಪತ್ತೆಗೆ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.

Key words: Coronavirus -confirmed – SSLC- student