Sunday, September 20, 2026

BDA Apartments

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 16,95,988 ಕ್ಕೆ ಏರಿಕೆ BDA JK_Adv BDA Adv
Home Front Page ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 16,95,988 ಕ್ಕೆ ಏರಿಕೆ

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 16,95,988 ಕ್ಕೆ ಏರಿಕೆ

ನವದೆಹಲಿ,ಅ,1,2020(www.justkannada.in): ದೇಶದಲ್ಲಿ ಕೋರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು  ದೇಶದ ಕೋವಿಡ್ ಸೋಂಕಿತರ ಸಂಖ್ಯೆ 16,95,988ಕ್ಕೆ ಏರಿಕೆಯಾಗಿದೆ.jk-logo-justkannada-logo

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 57,117 ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಒಂದೇ ದಿನ ದೇಶದಲ್ಲಿ 764 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.  ಈ ಮೂಲಕ ಕೊರೋನಾಗೆ ಮೃತಪಟ್ಟವರ ಸಂಖ್ಯೆ 36,511ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಇದುವರೆಗೆ 10,94,374 ಮಂದಿ ಸೋಂಕಿತರು ಗುಣಮುಖರಾಗಿದ್ದು, ಇನ್ನೂ 5,65,103 ಸಕ್ರಿಯ ಪ್ರಕರಣಗಳಿವೆ. ನಿನ್ನೆ ಕರ್ನಾಟಕದಲ್ಲಿ 5483 ಹೊಸ  ಕೊರೋನಾ ಪ್ರಕರಣಗಳು ಪತ್ತೆಯಾಗಿತ್ತು. ಬೆಂಗಳೂರು ನಗರದಲ್ಲಿ 2220, ಬಳ್ಳಾರಿಯಲ್ಲಿ 340, ಉಡುಪಿಯಲ್ಲಿ 213 ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 204 ಹೊಸ  ಪ್ರಕರಣಗಳು ಪತ್ತೆಯಾಗಿದ್ದವು.

Key words: Coronavirus –country- rises  16,95,988