ದೇಶದಲ್ಲಿ ಒಂದೇ ದಿನದಲ್ಲಿ 2.59 ಲಕ್ಷ ಮಂದಿಗೆ ಕೊರೋನಾ ಸೋಂಕು ಪತ್ತೆ…

ನವದೆಹಲಿ,ಮೇ,21,2021(www.justkannada.in): ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ -19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. jk

ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸದಾಗಿ 2,59,591 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದ್ದು,  ಒಂದೇ ದಿನದಲ್ಲಿ ದೇಶದಲ್ಲಿ 2,59,591  ಕೊರೋನಾ ಪ್ರಕರಣಗಳು ಕಂಡು ಬಂದಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 2,60,31,991ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ ಕಳೆದ 24 ಗಂಟೆಯಲ್ಲಿ 4,209 ಮಂದಿ ಕೊರೊನಾ ಸೋಂಕಿಗೆ ಮೃತಪಟ್ಟಿದ್ದು, ಈ ಮೂಲಕ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,91,331 ಕ್ಕೆ ಏರಿಕೆಯಾಗಿದೆ.coronavirus-detects-2-59-lakh-people-single-day

ದೇಶದಲ್ಲಿ ಈವರೆಗೆ ಕೊರೊನಾ ಸೋಂಕಿನಿಂದ 2,27,12,735 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 30,27,925 ಸಕ್ರಿಯ ಪ್ರಕರಣಗಳಿವೆ.

Key words: Coronavirus –detects- 2.59 lakh -people – single day