Tuesday, September 29, 2026

BDA Apartments

ಬೆಂಗಳೂರಿನಲ್ಲಿ ಮತ್ತೆ ಮೂವರಲ್ಲಿ ಕೊರೋನಾ ಸೋಂಕು ಪತ್ತೆ: ಆರೋಗ್ಯ ಸಚಿವ ಶ್ರೀ...
Home Front Page ಬೆಂಗಳೂರಿನಲ್ಲಿ ಮತ್ತೆ ಮೂವರಲ್ಲಿ ಕೊರೋನಾ ಸೋಂಕು ಪತ್ತೆ: ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್…

ಬೆಂಗಳೂರಿನಲ್ಲಿ ಮತ್ತೆ ಮೂವರಲ್ಲಿ ಕೊರೋನಾ ಸೋಂಕು ಪತ್ತೆ: ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್…

ಬೆಂಗಳೂರು,ಮಾ,10,2020(www.justkannada.in):  ನಿನ್ನೆಯಷ್ಟೇ ಬೆಂಗಳೂರಿನಲ್ಲಿ  ಟೆಕ್ಕಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿತ್ತು. ಇದೀಗ ಮತ್ತೆ ಮೂವರಲ್ಲಿ ಕೊರೀನಾ ಸೋಂಕು ಪತ್ತೆಯಾಗಿದ್ದು ತೀವ್ರ ಆತಂಕ ಸೃಷ್ಠಿಸಿದೆ. ಈ ಮೂಲಕ ಕೊರೊನಾ ಸೋಂಕಿತ ಸಂಖ್ಯೆ ಬೆಂಗಳೂರಿನಲ್ಲಿ ನಾಲ್ಕಕ್ಕೇರಿದೆ.

ಕಳೆದ ನಿನ್ನೆಯಷ್ಟೇ ಬೆಂಗಳೂರು ಮೂಲದ ಅಮೇರಿಕಾದಿಂದ ಬಂದ ವ್ಯಕ್ತಿಗೆ ಕೊರೊನಾ ವೈರಸ್ ಸೋಂಕು ಕಂಡುಬಂದಿರುವುದಾಗಿ ಆರೋಗ್ಯ ಇಲಾಖೆ ಸ್ಪಷ್ಟ ಪಡಿಸಿತ್ತು. ಇದೀಗ  ಮತ್ತೆ ಮೂವರಿಗೆ ಕೊರೊನಾ ಸೋಂಕು ತಗುಲಿರುವುದು ಬೆಳಕಿಗೆ ಬಂದಿದೆ.  ಟೆಕ್ಕಿ ಪತ್ನಿ, ಮಗು, ಸಹದ್ಯೋಗಿಗೆ ಸೋಂಕು ತಗುಲಿರುವುದು ದೃಢವಾಗಿದೆ.coronavirus-infection-detected-again-bangalore-health-minister-sriramulu

ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು,  ಕರ್ನಾಟಕದಲ್ಲಿ ಇದುವರೆಗೆ 4 ವ್ಯಕ್ತಿಗಳಲ್ಲಿ #COVID19 ಸೋಂಕು ದೃಢಪಟ್ಟಿದ್ದು, ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಗರಿಕರು ಮುಂಜಾಗೃತ ಕ್ರಮ ವಹಿಸಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಕೋರುತ್ತೇನೆ  ಮನವಿ ಮಾಡಿದ್ದಾರೆ.

Key words: Coronavirus -infection -detected -again – Bangalore-Health Minister- Sriramulu