ರಾಜ್ಯದಲ್ಲಿ ಇಂದು ಒಂದೇ ದಿನ ನಾಲ್ವರಲ್ಲಿ ಕೊರೋನಾ ಸೋಂಕು ಪತ್ತೆ- ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ…

ಚಿಕ್ಕಬಳ್ಳಾಪುರ,ಮಾ,21,2020(www.justkannada.in):  ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕಿಗೆ ಇಂದು ಒಂದೇ ದಿನ ನಾಲ್ವರು ತುತ್ತಾಗಿರುವುದಾಗಿ ಮಾಹಿತಿ ತಿಳಿದು ಬಂದಿದೆ.

ಹೌದು, ಈ ಬಗ್ಗೆ ಸ್ವತಃ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರೇ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಾಲ್ವರಿಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ. ಗೌರಿ ಬಿದನೂರಿನ ಒಬ್ಬರಿಗೆ ಹಾಗೂ ಬೆಂಗಳೂರಿನ ಮೂವರಲ್ಲಿ ಕೊರೊನಾ ಸೊಂಕು ಪತ್ತೆಯಾಗಿರುವುದು ದೃಢವಾಗಿದೆ ಎಂದು ತಿಳಿಸಿದ್ದಾರೆ.

ಕೆಲ ಸಮಯಗಳ ಹಿಂದಷ್ಟೇ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಒಂದು ಒಂದೇ ದಿನ ಮೂವರಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದೆ ಎಂದು ತಿಳಿಸಿತ್ತು. ಇದೀಗ ರಾಜ್ಯದಲ್ಲಿ ಇಂದು ನಾಲ್ವರಿಗೆ ಕೊರೋನಾ ಸೋಂಕು ಪತ್ತೆಯಾಗಿರುವ ಬಗ್ಗೆ ಸಚಿವ ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಲೇ ಇದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ಮೆಕ್ಕಾದಿಂದ ಬಂದಿದ್ದ ಗೌರಿಬಿದನೂರು ಮೂಲದ 35 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.

Key words: Coronavirus -infection -detected – four -Medical Minister -Dr K Sudhakar