35 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ದೃಢ: ಇಂದಿನಿಂದ ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ…..

ಕೊಡಗು,ಮಾ,19,2020(www.justkannada.in):  ಕೊಡಗಿನಲ್ಲಿ ಕೊರೋನಾ ವೈರಸ್ ಸೋಂಕಿತ ಮೊದಲ ಪ್ರಕರಣ ಪತ್ತೆಯಾಗಿದ್ದು, ಮಡಿಕೇರಿಯ 35 ವರ್ಷದ ವ್ಯಕ್ತಿಗೆ ಕೊರೋನಾ ಸೋಂಕು ದೃಢವಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾಹಿತಿ ನೀಡಿದ್ದಾರೆ.

ಕೊಡಗಿನಲ್ಲಿ ವ್ಯಕ್ತಿಗೆ ಕೊರೋನಾ ಸೋಂಕು ಪತ್ತೆಯಾದ ಹಿನ್ನೆಲೆ ಇಂದಿನಿಂದ ಮಾರ್ಚ್ 31ರವರೆಗೆ ಕೊಡಗು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸೌದಿಯಿಂದ ಕೊಡಗಿಗೆ ಬಂದ ವ್ಯಕ್ತಿಯಲ್ಲಿ ಕೊರೋನಾ ವೈರಸ್ ಪತ್ತೆಯಾಗಿದ್ದು ಈ ಬಗ್ಗೆ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು. ಕೊಡಗು ಜಿಲ್ಲೆಯಲ್ಲಿ ಇದು ಮೊದಲ ಪ್ರಕರಣವಾಗಿದ್ದು ಕೊರೋನಾ ಸೋಂಕಿತ ವ್ಯಕ್ತಿಯನ್ನ ಪ್ರತ್ಯೇಕವಾಗಿ ಇರಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದರು.

ನಂತರ 2ನೇ ಹಂತದಲ್ಲಿ  35 ವರ್ಷದ ವ್ಯಕ್ತಿಗೆ ಪರೀಕ್ಷೆ ಮಾಡಲಾಗಿದ್ದು 2ನೇ ಹಂತದ ಪರೀಕ್ಷೆಯಲ್ಲೂ ಸೌದಿಯಿಂದ ಬಂದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಹಾಗೆಯೇ  ಇಂದಿನಿಂದ ಮಾರ್ಚ್ 31ರವೆರೆಗೆ  ಕೊಡಗು ಜಿಲ್ಲೆಯಲ್ಲಿ 144(3) ಸೆಕ್ಷನ್ ಜಾರಿಗೊಳಿಸಿ ಆದೇಶಿಸಿದ್ದಾರೆ.

Key words: Coronavirus- infection –  person-144 section- Kodagu district