ದೇಶದಲ್ಲಿ ಒಂದೇ ದಿನ 11,502 ಮಂದಿಗೆ ಕೊರೋನಾ ಸೋಂಕು…

0
174

ನವದೆಹಲಿ,ಜೂ,15,2020(www.justknnada.in):  ದೇಶದಲ್ಲಿ ಕೊರೊನಾ ವೈರಸ್  ಅಟ್ಟಹಾಸ ದಿನದಿಂದ ದಿನಕ್ಕೆ ಗೆಚ್ಚಾಗುತ್ತಿದ್ದು ಈ ನಡುವೆ ಒಂದೇ ದಿನ 11,502 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಗಳಲ್ಲಿ ಕೊರೊನಾಗೆ 325 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಭಾರತದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 9,520 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.coronavirus-infects-11502-people-single-day

ದೇಶದಲ್ಲಿ ಸೋಂಕಿತರ ಸಂಖ್ಯೆ 3,32,424 ಕ್ಕೆ ಏರಿಕೆಯಾಗಿದೆ. ಈ ಪೈಕಿ 1,69,797 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ  ಡಿಸ್ಚಾರ್ಜ್ ಆಗಿದ್ದಾರೆ.

Key words: Coronavirus- infects -11,502 people – single day.