Thursday, August 20, 2026

BDA Apartments

Home Front Page ಹಾಸನದಲ್ಲೂ ಕೊರೊನಾ ವೈರಸ್ ಆರ್ಭಟ: ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಹಾಸನದಲ್ಲೂ ಕೊರೊನಾ ವೈರಸ್ ಆರ್ಭಟ: ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಹಾಸನ, ಜುಲೈ 05, 2020 (www.justkannada.in): ಹಾಸನದಲ್ಲೂ ಕೊರೊನಾ ವೈರಸ್ ಆರ್ಭಟ ಮುಂದುವರೆದಿದ್ದು, ಇಂದು ಒಬ್ಬರು ಕೊರೊನಾ ವೈರಸ್ ಸೋಂಕಿತರು ಸಾವನ್ನಪ್ಪಿದ್ದಾರೆ.

ಅರಸೀಕೆರೆಯ 77 ವರ್ಷದ ವೃದ್ಧರೊಬ್ಬರು ಕಳೆದ ರಾತ್ರಿ 11:45ಕ್ಕೆ ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ 8ಕ್ಕೆ ಏರಿಕೆಯಾದಂತಾಗಿದೆ.

ನ್ಯೂಮೊನಿಯಾ ಹಾಗು ರಕ್ತದ ಒತ್ತಡ ಮತ್ತಿತರ ಸಮಸ್ಯೆಗಳಿಂದ ಬಳಲುತ್ತಿದ್ದ ಸೋಂಕಿತರನ್ನು ಹಾಸನದ ಕೋವಿಡ್‌ ಆಸ್ಪತ್ರೆಯಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ‌ಫಲಕಾರಿಯಾಗದೆ ಅಸುನೀಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಸತೀಶ್ ತಿಳಿಸಿದ್ದಾರೆ.