ಬೆಂಗಳೂರಿನಲ್ಲಿ ಮತ್ತಿಬ್ಬರು ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ದೃಢ…

ಬೆಂಗಳೂರು,ಜೂ,22,2020(www.justkannada.in):  ಬೆಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ಹರಡುತ್ತಿದ್ದು, ಈ ನಡುವೆ ಇಂದು ಸಹ ಇಬ್ಬರು ಸಿಬ್ಬಂದಿಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ.

 ಬೆಂಗಳೂರಿನ ಸಿಸಿಬಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಓರ್ವ ಸಿಬ್ಬಂದಿ ಹಾಗೂ ಕುಮಾರಸ್ವಾಮಿ ಲೇಔಟ್ ನ ಟ್ರಾಫಿಕ್ ಪೇದೆಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಹಿನ್ನಲೆಯಲ್ಲಿ ಸೋಂಕು ಪೀಡಿತ ಸಿಬ್ಬಂದಿಯ ಸಂಪರ್ಕಕ್ಕೆ ಬಂದಿದ್ದ ಎಲ್ಲರನ್ನು ಪತ್ತೆ ಹಚ್ಚಿದ್ದು, ಅವರನ್ನು ಕ್ವಾರಂಟೈನ್ ಮಾಡಲಾಗಿದೆ.coronavirus-two-police-bangalore

ಬೆಂಗಳೂರಿನಲ್ಲಿ 69 ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜ್ಯದಲ್ಲಿ  ಕೆ.ಎಸ್.ಆರ್.ಪಿಯ 56 ಸಿಬ್ಬಂದಿಗೆ ಮಾರಕ ಕೊರೊನಾ ಹರಡಿದೆ. ಈ ಪೈಕಿ ಬೆಂಗಳೂರಿನಲ್ಲಿ 10, ಮೈಸೂರು 16, ಹಾಸನ 7, ಶಿವಮೊಗ್ಗ21, ಕಲಬುರಗಿ 2 ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ.

Key words: Coronavirus – two-police- Bangalore