ಕೊರೋನಾ ಲಸಿಕೆ ಮಾರಾಟ ದಂಧೆ ಮಾಡಿದ್ರೆ ಕಠಿಣ ಕ್ರಮ- ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ…

ಬೆಂಗಳೂರು,ಮೇ,24,2021(www.justkannada.in): ಕೋವಿಡ್ ಲಸಿಕೆ ಮಾರಾಟ ದಂಧೆಯಲ್ಲಿ ತೊಡಗಿದರೇ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.jk

ಇಂದು ಮಾಧ್ಯಮಗಳ ಜತೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೊರೋನಾ ಲಸಿಕೆ ಕೊರತೆ ನೀಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಮಧ್ಯೆ ಲಸಿಕೆ ದಂಧೆ ಮಾಡಲು ಬಿಡುವುದಿಲ್ಲ. ಒಂದು ವೇಳೆ ಲಸಿಕೆ ಮಾರಾಟ ದಂಧೆ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಯಾವುದೇ ಕಾರಣಕ್ಕೂ ತಪ್ಪಿತಸ್ಥರನ್ನ ಬಿಡುವುದಿಲ್ಲ ಎಂದರು.coronavirus-vaccine-tough-action-home-minister-basavaraja-bommai

ಇನ್ನು ಗ್ರಾಮೀಣ ಪ್ರದೇಶಗಳಲ್ಲಿ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿ ಮಾಡಲಾಗಿದೆ. ಆದರೆ ಪಟ್ಟಣಗಳಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘನೆಯಾಗುತ್ತಿದೆ. ಹೀಗಾಗಿ ಬಿಗಿಕ್ರಮಕ್ಕೆ ಪೊಲೀಸರಿಗೆ ಸೂಚಿಸಿದ್ದೇನೆ. ಅದ್ದರಿಂದ ಯಾರೂ ಸಹ ಅನಗತ್ಯವಾಗಿ ಹೊರಗೆ ಬರಬೇಡಿ ಎಂದು ಸಚಿವ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.

Key words: Coronavirus –Vaccine- Tough action- Home Minister -Basavaraja Bommai