Wednesday, September 16, 2026

BDA Apartments

Home Front Page ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಭ್ರಷ್ಟಾಚಾರ ಮುಕ್ತ ಆಡಳಿತ- ಹೆಚ್ ಡಿಕೆಗೆ ಸಚಿವ ಸುಧಾಕರ್ ಟಾಂಗ್.

ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಭ್ರಷ್ಟಾಚಾರ ಮುಕ್ತ ಆಡಳಿತ- ಹೆಚ್ ಡಿಕೆಗೆ ಸಚಿವ ಸುಧಾಕರ್ ಟಾಂಗ್.

ಚಿಕ್ಕಬಳ್ಳಾಪುರ,ಫೆಬ್ರವರಿ,25,2023(www.justkannada.in):  ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಟೀಕಿಸಿದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟಾಂಗ್ ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಸುಧಾಕರ್,  ಬಿಜೆಪಿ ಅಧಿಕಾರಕ್ಕೆ  ಬಂದಾಗಲೆಲ್ಲಾ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದೆ.  ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದಲ್ಲಿ ಸರ್ಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹಾಗೂ ರಾಜ್ಯದಲ್ಲೂ ಬಿಜೆಪಿ ಸರ್ಕಾರದಿಂದ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದೆ. ಆದರೆ ಹೆಚ್.ಡಿ ಕುಮಾರಸ್ವಾಮಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ಹೆಚ್.ಡಿ ಕುಮಾರಸ್ವಾಮಿ  ತಮ್ಮ ಆರೋಪಗಳಿಗೆ ಯಾವುದೇ ದಾಖಲೆ ಒದಗಿಸಿಲ್ಲ ಎಂದು ಕಿಡಿಕಾರಿದರು.

ಯಾರ ಕಾಲದಲ್ಲಿ ಏನಾಗಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಲಿ. ಬಿಜೆಪಿ ಹಿರಿಯ ನಾಯಕರಾದ ಅಮಿತ್  ಶಾ ಜನರಿಗೆ ಭರವಸೆ ನೀಡಿದ್ದಾರೆ ಭ್ರಷ್ಟಾಚಾರ ಮುಕ್ತ ಆಡಳಿತ  ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಹಾಗೆಹೇ ಹೆಚ್.ಡಿ ಕುಮಾರಸ್ವಾಮಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡ್ತೀವಿ ಅಂತಾ ಹೇಳಲಿ ನೋಡೋಣ ಎಂದು ಸವಾಲು ಹಾಕಿದರು.

Key words: Corruption -free -governance – BJP  -Minister -Sudhakar – HDK