Tuesday, September 22, 2026

BDA Apartments

ಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಮಾ.13ರೊಳಗೆ ಅರ್ಜಿ ಸಲ್ಲಿಸಿ BDA JK_Adv BDA Adv
Home Front Page ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ ಶರವಣ ನಾಮಪತ್ರ ಸಲ್ಲಿಕೆ.

ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ ಶರವಣ ನಾಮಪತ್ರ ಸಲ್ಲಿಕೆ.

ಬೆಂಗಳೂರು,ಮೇ,24,2022(www.justkannada.in): ವಿಧಾನಸಭೆ ಚುನಾವಣೆ ಹಿನ್ನೆಲೆ ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ ಶರವಣ ನಾಮಪತ್ರ ಸಲ್ಲಿಕೆ ಮಾಡಿದರು.

ಮಾಜಿ ಪರಿಷತ್ ಸದಸ್ಯ ಟಿ.ಎ ಶರವಣ ಅವರಿಗೆ, ಮತ್ತೆ ವಿಧಾನ ಪರಿಷತ್ ಚುನಾವಣೆಗಾಗಿ ಟಿಕೆಟ್ ನೀಡಲಾಗಿದ್ದು,  ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು  ಟಿಎ ಶರವಣ ಅವರಿಗೆ ಬಿ ಫಾರಂ   ವಿತರಿಸಿದರು.  ನಂತರ ಟಿ.ಎ ಶರವಣ ಅವರು ಚುನಾವಣಾಧಿಕಾರಿ ವಿಶಾಲಾಕ್ಷಿ ಅವರಿಗೆ  ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದರು.ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿಯಾಗಿ ಟಿ.ಎ ಶರವಣ ನಾಮಪತ್ರ ಸಲ್ಲಿಕೆ sharavana

ಇತ್ತೀಚೆಗೆ ಕಾಂಗ್ರೆಸ್  ತೊರೆದು ಜೆಡಿಎಸ್ ಸೇರ್ಪಡೆಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿರುವ ಸಿಎಂ ಇಬ್ರಾಹಿಂ ಅವರಿಗೆ ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡಲಾಗುತ್ತದೆ ಎನ್ನಲಾಗಿತ್ತು.ಆದರೆ  ಕೊನೆಯ ಕ್ಷಣದಲ್ಲಿ ಟಿ.ಎ ಶರವಣ ಅವರಿಗೆ ಜೆಡಿಎಸ್ ನಿಂದ ಟಿಕೆಟ್ ನೀಡಲಾಗಿದೆ.

ಜೂನ್ 3 ರಂದು ನಡೆಯುವ ವಿಧಾನ ಪರಿಷತ್ 7 ಸ್ಥಾನಗಳ ಚುನಾವಣೆಗೆ  ನಾಮಪತ್ರ ಸಲ್ಲಿಸಲು 3 ಗಂಟೆವರೆಗೆ ಮಾತ್ರ ಅವಕಾಶವಿದೆ.

Key words: Council-elections-JDS -candidate- TA Saravana-nomination