Monday, October 19, 2026

Dasara Wishes

Seven wonders of Karnataka campaign: Please vote for these six tourist places of Mysuru DasraWishes_JK DasraWishes JK
Happy Dasara
Home Front Page ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ: ಹೈಕಮಾಂಡ್ ನಾಯಕರು, ಶಾಸಕರು ಆಗಮನ

ಬೆಂಗಳೂರು,ಮೇ,30,2026 (www.justkannada.in):  ರಾಜ್ಯದಲ್ಲಿ ದಿಢೀರ್ ರಾಜಕೀಯ ಬೆಳವಣಿಗೆಯಾಗಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದು ಇದೀಗ ನೂತನ ಸಿಎಂ ಆಯ್ಕೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.

ಇಂದು ಸಂಜೆ 4 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ನಿಗದಿಯಾಗಿತ್ತು. ಹೀಗಾಗಿ ಕೆಲವೇ ಕ್ಷಣಗಳಲ್ಲಿ ಸಭೆ ಆರಂಭವಾಗಲಿದ್ದು ಸಭೆಗೆ  ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಸಹ ಆಗಮಿಸಿದ್ದಾರೆ. ಖಾಸಗಿ ಹೋಟೆಲ್‌ನಿಂದ ನೇರವಾಗಿ ಸಿಎಲ್​​​ಪಿ ಸಭೆ ನಡೆಯುವ ವಿಧಾನಸೌಧಕ್ಕೆ ಆಗಮಿಸಿದ್ದಾರೆ.

ಮುಂದಿನ ಸಿಎಂ ಎಂದೇ ಬಿಂಬಿತವಾಗಿರುವ ಡಿಕೆ ಶಿವಕುಮಾರ್ ಅವರು ಸಿಎಲ್ ಪಿ ಸಭೆಗೆ  ಗಮಿಸಿದ್ದಾರೆ. ಖಾಸಗಿ ಹೋಟೆಲ್​​ ನಲ್ಲಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಸಿ ವೇಣುಗೋಪಾಲ್ ಜೊತೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ನೇರವಾಗಿ ಖಾಸಗಿ ಕಾರಿನಲ್ಲಿ ವಿಧಾನಸೌಧಕ್ಕೆ ಆಗಮಿಸಿದ್ದಾರೆ.ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ dks-siddaramaiah dks siddaramaiah

ವಿಧಾನಸೌಧದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಕ್ಷಣಗಣನೆ ಆರಂಭವಾಗಿದ್ದು, ಶಾಸಕರು ಸಹ ಆಗಮಿಸುತ್ತಿದ್ದಾರೆ. ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್, ಶಾಸಕರಾದ ಟಿ.ಬಿ.ಜಯಚಂದ್ರ, ರಾಮಲಿಂಗಾರೆಡ್ಡಿ, ಸಿ.ಪಿ.ಯೋಗೇಶ್ವರ್​​, ಆನೇಕಲ್​​ ಶಿವಣ್ಣ, ಪ್ರದೀಪ್ ಈಶ್ವರ್​​, ಅಶೋಕ್ ಪಟ್ಟಣ್​​ , ಪುಟ್ಟರಂಗಶೆಟ್ಟಿ, ನಯನಾ ಮೋಟಮ್ಮ, ಲಕ್ಷ್ಮೀ ಹೆಬ್ಬಾಳ್ಕರ್, ಇಕ್ಬಾಲ್ ಹುಸೇನ್ ಸೇರಿ ಹಲವು ಶಾಸಕರು ಆಗಮಿಸಿದ್ದಾರೆ.ಹೈಕಮಾಂಡ್ ನಾಯಕರು jk02_new jk02 new

Key words: Countdown, CLP meeting,  High command, leaders,  MLAs, arrive