ಕಾಂಗ್ರೆಸ್ ಸರ್ಕಾರದಲ್ಲಿ ದಿನಕ್ಕೊಬ್ಬ ಅಜಿತ್ ಪವಾರ್ ಹುಟ್ಟಿ ಕೊಳ್ಳುತ್ತಿದ್ದಾರೆ‌- ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಟೀಕೆ.

ಮೈಸೂರು,ನವೆಂಬರ್,4,2023(www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ದಿನಕ್ಕೊಬ್ಬ ಅಜಿತ್ ಪವಾರ್ ಹುಟ್ಟಿ ಕೊಳ್ಳುತ್ತಿದ್ದಾರೆ‌. ಸರ್ಕಾರ ಬೀಳುವ ದಿನಗಣನೆ ಈಗ ಆರಂಭವಾಗಿದೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದರು.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎಸ್ ಈಶ್ವರಪ್ಪ,  ನಾನು ತಿಂಗಳು ವರ್ಷದ ಮಾತು ಆಡುತ್ತಿಲ್ಲ. ಕೆಲವೇ ದಿನಗಳಲ್ಲಿ ಸರ್ಕಾರ ಬೀಳಬಹುದು. ಕಾಂಗ್ರೆಸ್ ಸರ್ಕಾರ ಬಿದ್ದು ಅಲ್ಲಿನ ಯಾವುದೇ ಅಜಿತ್ ಪವಾರ್ ಬಿಜೆಪಿ ಜೊತೆ ಬಂದರೆ ನಾವು ಸೇರಿಸಿಕೊಳ್ಳುತ್ತೇವೆ. ಆದರೆ, ಬಂದ ಅಜಿತ್ ಪವಾರ್‌ ಗೆ ಸಿಎಂ ಸ್ಥಾನ ಕೊಡುವುದಿಲ್ಲ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್​ನಲ್ಲಿ ಈಗ ಹಾದಿ ಬೀದಿಯಲ್ಲಿ ಹೋಗುವವರೆಲ್ಲರೂ ಸಿಎಂ ಸ್ಥಾನ ಕೇಳುತ್ತಿದ್ದಾರೆ‌. ಪ್ರಿಯಾಂಕ್ ಖರ್ಗೆ ಅವರ  ತಂದೆಗೆ ಸಿಎಂ ಸ್ಥಾನ ಕೇಳಿದ್ದರೆ ಮೆಚ್ಚಿಕೊಳ್ಳುತ್ತಿದ್ದೆ. ಆದರೆ, ಅವರೇ ಕೇಳುತ್ತಿದ್ದಾರೆ, ಇದು ನಗೆಪಾಟಲಿಗೆ ವಿಚಾರ ಎಂದು ಕೆ.ಎಸ್ ಈಶ್ವರಪ್ಪ ಟೀಕಿಸಿದರು.

Key words:  countdown fall government now begun – former minister-KS Eshwarappa.