ನೂತನ ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನೆ.

ಬೆಂಗಳೂರು,ಮೇ,20,2023(www.justkannada.in):  ರಾಜ್ಯದ ನೂತನ ಸಿಎಂ ಆಗಿ ಸಿದ್ಧರಾಮಯ್ಯ ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಹಾಗೂ  8 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಕ್ಷಣಗಣನೆ ಆರಂಭವಾಗಿದೆ.

ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮಧ್ಯಾಹ್ನ 12.30ಕ್ಕೆ ಕರ್ನಾಟಕದ 31ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಡಿ.ಕೆ ಶಿವಕುಮಾರ್ ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ಡಿಸಿಎಂ ಆಗಿ ಅಧಿಕಾರವನ್ನು ಸ್ವೀಕರಿಸುತ್ತಿದ್ದಾರೆ.

ಈ ಹಿನ್ನಲೆ ಕಂಠೀರವ ಸ್ಟೇಡಿಯಂ ಸುತ್ತು ಎಲ್ಲೆಲ್ಲೂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫ್ಲೆಕ್ಸ್, ಬ್ಯಾನರ್​ಗಳು ರಾರಾಜಿಸುತ್ತಿವೆ. ಇನ್ನು ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಭಿಮಾನಿಗಳು, ಕಾರ್ಯಕರ್ತರು. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಆಗಮಿಸುತ್ತಿದ್ದಾರೆ.

ಇಂದು ಕಂಠೀರವ ಸ್ಟೇಡಿಯಂನಲ್ಲಿ ನೂತನ ಸಿಎಂ, ಡಿಸಿಎಂ ಪದಗ್ರಗಣ ಹಿನ್ನಲೆ ಕಾರ್ಯಕ್ರಮಕ್ಕೆ ಕೇಂದ್ರದ ಘಟಾನುಘಟಿ ನಾಯಕರು ಆಗಮಿಸುತ್ತಿದ್ದಾರೆ. ಜೊತೆಗೆ ಕಾರ್ಯಕ್ರಮದಲ್ಲಿ ಹಲವು ರಾಜ್ಯಗಳ ಸಿಎಂಗಳು ಭಾಗಿಯಾಗಲಿದ್ದಾರೆ. ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಲಿದ್ದಾರೆ. ವಿಶೇಷ ಸರ್ಕಾರಿ ವಾಹನಗಳಲ್ಲಿ ಪೊಲೀಸ್ ಭದ್ರತೆಯೊಂದಿಗೆ ಕಾರ್ಯಕ್ರಮಕ್ಕೆ ಆಗಮಿಸಿಲಿದ್ದಾರೆ.

Key words: Countdown – Siddaramaiah -new CM-DCM- DK Shivakumar – oath.