ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ: ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಂಪುಟ ಸಭೆ.

ಬೆಂಗಳೂರು,ಫೆಬ್ರವರಿ,17,2023(www.justkannada.in): ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗ್ಗೆ 10.15ಕ್ಕೆ ಬಿಜೆಪಿ ಸರ್ಕಾರದ ಕೊನೇ ಹಾಗೂ 2ನೇ ಬಜೆಟ್ ಮಂಡಿಸಲಿದ್ದಾರೆ.

ರಾಜ್ಯ ವಿಧಾನ ಸಭಾ ಚುನಾವಣೆ  ಸಮೀಪಿಸುತ್ತಿದ್ದು ಇದನ್ನ ಗಮನದಲ್ಲಿಟ್ಟುಕೊಂಡು ಜನರ ಮನಸ್ಸು ಗೆಲ್ಲಲು ಸಿಎಂ ಬಸವರಾಜ ಬೊಮ್ಮಾಯಿ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಬಂಪರ್ ಬಜೆಟ್ ಮಂಡನೆಯಾಗುವ ನಿರೀಕ್ಷೆ ಜನರಲ್ಲಿದೆ. ಇನ್ನೇನು ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಹೀಗಾಗಿ ಜನರ ಮೇಲೆ ಹೊಸ ತೆರಿಗೆ ಹೊರೆ ಹಾಕದೆ, ಜನರನ್ನು ತಮ್ಮತ್ತ ಸೆಳೆಯುವ ಜನಪ್ರಿಯ ಯೋಜನೆಗಳನ್ನು, ಘೋಷಣೆಗಳನ್ನೊಳಗೊಂಡ ಬಜೆಟ್ ಮಂಡಿಸುವತ್ತ ಸಿಎಂ ಬಸವರಾಜ ಬೊಮ್ಮಾಯಿ ಗಮನ ಹರಿಸಿದ್ದಾರೆ ಎನ್ನಲಾಗಿದೆ.

ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಸಂಪುಟ ಸಭೆಯಲ್ಲಿ ಬಜೆಟ್ ಗೆ ಒಪ್ಪಿಗೆ ಪಡೆಯಲಿದ್ದಾರೆ. ಬಜೆಟ್​ನಲ್ಲಿ ಸಾಮಾನ್ಯ ಜನರಿಗೆ, ಕೃಷಿಕರಿಗೆ, ಮಹಿಳೆಯರಿಗೆ, ಯುವಕರಿಗೆ ಭರ್ಜರಿ ಕೊಡುಗೆಗಳನ್ನು ನೀಡಲಿದ್ದಾರೆಯೇ ಕಾದು ನೋಡಬೇಕಿದೆ.

Key words: Countdown – state budget – Cabinet meeting – CM Bommai.