ನೂತನ ಸಚಿವರ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನೆ: ರಾಜಭವನ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್.

0
2

ಬೆಂಗಳೂರು,ಮೇ,27,2023(www.justkannada.in):  ಸಿಎಂ  ಸಿದ್ದರಾಮಯ್ಯ ಅವರ ನೇತೃತ್ವದ ಸಚಿವ ಸಂಪುಟಕ್ಕೆ ಇಂದು  24 ಮಂದಿ ಸೇರ್ಪಡೆಯಾಗುತ್ತಿದ್ದು, ಇಂದು ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.

ಇಂದು ಬೆಳಗ್ಗೆ 11.45ಕ್ಕೆ ರಾಜಭವನದ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮುಖ್ಯಮ೦ತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಒಳಗೊಂಡ ಹಾಲಿ ಅಸ್ತಿತ್ವವಿರುವ 10 ಮಂದಿಯ ಸಚಿವ ಸಂಪುಟಕ್ಕೆ ಶನಿವಾರ 24 ಮಂದಿ ಸೇರ್ಪಡೆಯಾಗುತ್ತಿದ್ದಾರೆ.

ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ಹಿನ್ನೆಲೆ ರಾಜಭವನ ಸುತ್ತಮುತ್ತ ಭದ್ರತೆಗಾಗಿ 2700 ಪೊಲಿಸ್ ಸಿಬ್ಬಂಧಿಯನ್ನು ನಿಯೋಜನೆ ಮಾಡಲಾಗಿದೆ.  17 ಡಿಸಿಪಿ, 37 ಎಸಿಪಿ, 114 ಇನ್ಸ್ ಪೆಕ್ಟರ್ , 208 ಪಿಎಸ್​ ಐ, ಸೇರಿ 2700 ಪೊಲೀಸರನ್ನು ನಿಯೋಜಿಸಲಾಗಿದೆ.  ಮಫ್ತಿಯಲ್ಲೂ  200 ಕ್ಕೂ ಅಧಿಕ ಪೊಲೀಸರು ಕಾರ್ಯ ನಿರ್ವಹಿಸಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಡಿಸ್ವಾಟ್, ವಾಟರ್​ ಜೆಟ್ ನಿಯೋಜನೆ ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

Key words: Countdown – swearing- new ministers- police -security -Raj Bhavan.