ದೇಶ ನಡೆಯುತ್ತಿರುವುದು ಸಂವಿಧಾನದ ಮೇಲೆ: ಭಗವದ್ಗೀತೆ, ಕುರಾನ್ ಮೇಲೆ ಅಲ್ಲ- ಸಚಿವ ಪ್ರಿಯಾಂಕ್ ಖರ್ಗೆ.

ಬೆಂಗಳೂರು, ಡಿಸೆಂಬರ್,27,2023(www.justkannada.in): ದೇಶ ನಡೆಯುತ್ತಿರುವುದು ಸಂವಿಧಾನದ ಮೇಲೆ ಹೊರತು ಭಗವದ್ಗೀತೆ, ಕುರಾನ್ ಮೇಲೆ ಅಲ್ಲ ಎಂದು ಗ್ರಾಮೀಣಾಭಿವೃದ್ಧಿ  ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ,  ಈ ಹಿಂದೆ ರಾಜ್ಯದಲ್ಲಿ ಹಿಂದುತ್ವದ ಸರ್ಕಾರ ಇತ್ತು. ಈಗ ಸಂವಿಧಾನದ ಸರ್ಕಾರ ಇದೆ. ದೇಶ ನಡೆಯುತ್ತಿರುವುದು ಭಗವದ್ಗೀತೆ ಮೇಲೆ ಅಲ್ಲ, ಕುರಾನ್ ಮೇಲೆ ಅಲ್ಲ, ಬೈಬಲ್ ಮೇಲೆ ಅಲ್ಲ. ದೇಶ ನಡೆಯುತ್ತಿರುವುದು ಸಂವಿಧಾನದ ಮೇಲೆ. ಯಾರು ಏನೆ ಅಂದರೂ ಕರ್ನಾಟಕದಲ್ಲಿ ನಡೆಯುತ್ತಿರುವುದು ಸಂವಿಧಾನದ ಸರ್ಕಾರವೇ ಎಂದು ಹೇಳಿದರು.

ಸ್ಪೀಕರ್ ಪೀಠದ ಮೇಲೆ ಕುಳಿತು  ವಿಶ್ವೇಶ್ವರ ಹೆಗಡೆ ಕಾಗೇರಿ ನಾನು ಆರ್‌ಎಸ್‌ಎಸ್‌ನವರು ಎಂದಿದ್ದರು. ಕೋವಿಡ್ ಕಾಲದಲ್ಲಿ ಬಿಜೆಪಿಯವರು ಹೆಣದ ಮೇಲೆ ಹಣ ಮಾಡಿದ್ದಾರೆ. ಯತ್ನಾಳ್‌ ಆರೋಪಕ್ಕೆ ವಿಜಯೇಂದ್ರ ಉತ್ತರ ಕೊಡಬೇಕು ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

Key words: Country – Constitution- not –Quran- Bhagavad Gita- Minister -Priyank Kharge.