ದೇಶದ ಕೊರೊನಾ ಮೀಟರ್: 41,506 ಹೊಸ ಪ್ರಕರಣ, 895 ಮಂದಿ ಸಾವು

ಬೆಂಗಳೂರು, ಜುಲೈ 11, 2021 (www.justkannada.in): ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 41,506 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ.

ಒಂದೇ ದಿನ 41,526 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೆ ಕೋವಿಡ್‌ನಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 2,99,75,064ಕ್ಕೆ ತಲುಪಿದೆ.

895 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ. ಈ ಮೂಲಕ ದೇಶದಲ್ಲಿ 4,08,040 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಒಟ್ಟು 37,60,32,586 ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ತಿಳಿಸಿದೆ.