Friday, October 2, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ದೇಶದ ಕೊರೊನಾ ಮೀಟರ್: 43,733 ಹೊಸ ಸೋಂಕಿತರು, 47,240 ಮಂದಿ ಗುಣಮುಖ

ದೇಶದ ಕೊರೊನಾ ಮೀಟರ್: 43,733 ಹೊಸ ಸೋಂಕಿತರು, 47,240 ಮಂದಿ ಗುಣಮುಖ

ಬೆಂಗಳೂರು, ಜುಲೈ 07, 2021 (www.justkannada.in): ಕಳೆದ 24 ಗಂಟೆಯಲ್ಲಿ ದೇಶದಲ್ಲಿ 43,733 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣ ಪತ್ತೆಯಾಗಿವೆ.

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಗುಣಮುಖರಾಗುತ್ತಿರುವವರ ಸಂಖ್ಯೆಯೂ ಏರುತ್ತಿದೆ.

43,733 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ. ಒಟ್ಟಾರೆ ಸೋಂಕಿತರ ಸಂಖ್ಯೆ 3,06,63,665 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 930 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,04,211 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಗಳಲ್ಲಿ 47,240 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ 4,59,920 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.