Monday, August 24, 2026

BDA Apartments

Home Cinema ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಕೋರ್ಟ್ ಒಪ್ಪಿಗೆ

ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಕೋರ್ಟ್ ಒಪ್ಪಿಗೆ

ಬೆಂಗಳೂರು,ಆಗಸ್ಟ್,27,2024 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು 24ನೇ ಎಸಿಎಂಎಂ ನ್ಯಾಯಾಲಯ ಒಪ್ಪಿಗೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ ನೀಡಿರುವ ಫೋಟೊ ವೈರಲ್ ಆಗಿತ್ತು. ಇದರ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿ ಸಾಕಷ್ಟು ಟೀಕೆಗಳು ವ್ಯಕ್ತವಾದವು. ತಕ್ಷಣ ಎಚ್ಚೆತ್ತ ಸರ್ಕಾರ 9 ಮಂದಿ ಜೈಲು ಸಿಬ್ಬಂದಿಯನ್ನ ಅಮಾನತುಗೊಳಿಸಿತ್ತು.

ಅಲ್ಲದೆ ನಟ ದರ್ಶನ್ ಅವರನ್ನ ಬೇರೆ ಜೈಲಿಗೆ ಶಿಫ್ಟ್ ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿತ್ತು. ಇದೀಗ ನಟ ದರ್ಶನ್ ಅವರನ್ನ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು 24ನೇ ಎಸಿಎಂಎಂ  ಕೋರ್ಟ್ ಆದೇಶ ಹೊರಡಿಸಿದೆ. ಉಳಿದ ಆರೋಪಿಗಳನ್ನ ಬೇರೆ ಜೈಲಿಗೆ ಸ್ಥಳಾಂತರಿಸಲು ಒಪ್ಪಿಗೆ ಸೂಚಿಸಿದೆ. ಪೊಲೀಸರು ಕೋರ್ಟ್ ನಿಂದ ಆದೇಶ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Court, actor, Darshan, shift, Bellary Jail