Friday, August 21, 2026

BDA Apartments

Home Cinema ನಟ ದರ್ಶನ್ ಗೆ ಜೈಲೇ ಗತಿ: ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ನಟ ದರ್ಶನ್ ಗೆ ಜೈಲೇ ಗತಿ: ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್

ಬೆಂಗಳೂರು,ಅಕ್ಟೋಬರ್,14,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿಯನ್ನ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿ ಆದೇಶಿಸಿದೆ.

ಈ ಮೂಲಕ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಗೆ ಹಿನ್ನೆಡೆಯಾಗಿದೆ. ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ 57ನೇ ಸಿಸಿಎಚ್ ನ್ಯಾಯಲಯ ಜಾಮೀನು ಕುರಿತು ಆದೇಶವನ್ನ ಇಂದಿಗೆ ಕಾಯ್ದಿರಿಸಿತ್ತು.

ಇದೀಗ ಕೋರ್ಟ್ ಆದೇಶ ಪ್ರಕಟಿಸಿದ್ದು ನಟ ದರ್ಶನ್ ಗೆ ಜಾಮೀನು ನೀಡಲು ನಿರಾಕರಿಸಿದೆ. ಈ ಮೂಲಕ ನಟ ದರ್ಶನ್ ಗೆ ಜೈಲೇ ಗತಿಯಾಗಿದೆ. ಇನ್ನು ಪ್ರಕರಣದಲ್ಲಿ ಎ1 ಪವಿತ್ರಗೌಡಗೂ ಜಾಮೀನು ನಿರಾಕರಿಸಲಾಗಿದೆ.

Key words: Court, dismisses, actor Darshan,  bail application