Sunday, October 4, 2026

BDA Apartments

Home Crime ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್.

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್.

ಬೆಂಗಳೂರು,ಮೇ,31,2024 (www.justkannada.in):  ಸಂತ್ರಸ್ತ ಮಹಿಳೆಯ ಕಿಡ್ನಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾಗೊಳಿಸಿದೆ.

ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಸಂತ್ರಸ್ತ ಮಹಿಳೆಯನ್ನ ಕಿಡ್ನಾಪ್ ಮಾಡಿದ ಆರೋಪದಲ್ಲಿ ಬಂಧನ ಭೀತಿಯಿಂದ ಶಾಸಕ ಹೆಚ್.ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್ bhavani revanna

ಅರ್ಜಿ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಾದ ಪ್ರತಿವಾದ ಆಲಿಸಿ ಇಂದಿಗೆ ಅರ್ಜಿ ಆದೇಶ ಕಾಯ್ದಿರಿಸಿತ್ತು. ಇದೀಗ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿಯನ್ನ ವಜಾಗೊಳಿಸಿದೆ.

Key words: Court, dismisses, Bhavani Revanna, bail, application