ಗಲಭೆ ಪ್ರಕರಣ: ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು.

ಹುಬ್ಬಳ್ಳಿ, ಜನವರಿ,5,2024(www.justkannada.in): 1992ರ  ರಾಮಜನ್ಮಭೂಮಿ ಹೋರಾಟದ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕಾಂತ ಪೂಜಾರಿಗೆ ಹುಬ್ಬಳ್ಳಿಯ ಒಂದನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

1 ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಿಂದ ತೀರ್ಪು ಬಂದ ನಂತರ ದಾಖಲೆಗಳನ್ನು 5 ಮತ್ತು 3ನೇ ಜೆಎಮ್ಎಫ್‌ಸಿ ನ್ಯಾಯಾಲಕ್ಕೆ ನೀಡಬೇಕು. ತೀರ್ಪು ಆದೇಶವನ್ನ ಈ ಎರಡೂ ಕೋರ್ಟ್‌ಗಳಿಗೆ ತಲುಪಿಸಬೇಕು. ಬಳಿಕ ಸಂಜೆ 6 ಗಂಟೆಯೊಳಗೆ ತೀರ್ಪಿನ ಆದೇಶ ಜೈಲು ಅಧಿಕಾರಿಗಳ ಕೈ ಸೇರಬೇಕು.

31 ವರ್ಷದ ಹಳೇಯ ಕೇಸ್ ನಲ್ಲಿ ಶ್ರೀಕಾಂತ್ ಪೂಜಾರಿ ಬಂಧಿತರಾಗಿದ್ದರು ಡಿಸೆಂಬರ್ 29 ರಂದು ಶ್ರೀಕಾಂತ್ ಪೂಜಾರಿಯನ್ನ ಪೊಲೀಸರು ಬಂಧಿಸಿದ್ದರು. ಬಂಧನದ ಬಳಿಕ ಜಾಮೀನಿಗಾಗಿ ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಶ್ರೀಕಾಂತ್ ಪೂಜಾರಿ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಹುಬ್ಬಳ್ಳಿಯ 1ನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು.

Key words: court-granted –bail- Srikanth Pujari