ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಶಾಕ್: ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ ಕೋರ್ಟ್

ಬೆಂಗಳೂರು,ಜೂನ್,13,2024 (www.justkannada.in):  ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಸಂಕಷ್ಟ ಎದುರಾಗಿದ್ದು ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.

ಪೋಕ್ಸೋ ಪ್ರಕರಣವನ್ನ ಸಿಐಡಿ ತನಿಖೆ ನಡೆಸುತ್ತಿದ್ದು ವಿಚಾರಣೆಗೆ ಹಾಜರಾಗುವಂತೆ ಬಿಎಸ್ ಯಡಿಯೂರಪ್ಪಗೆ ನೋಟಿಸ್ ನೀಡಲಾಗಿತ್ತು. ಆದರೆ ಬಿಎಸ್ ಯಡಿಯೂರಪ್ಪ ಅವರು ವಿಚಾರಣೆ ಎದುರಿಸಿರಲಿಲ್ಲ.

ಈ ಮಧ್ಯೆ ಇದೀಗ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ  ಪೋಕ್ಸೋ ಪ್ರಕರಣದಲ್ಲಿ ಬಿಎಸ್ ವೈಗೆ ಬಂಧನ ಭೀತಿ ಎದುರಾಗಿದೆ.  ಯಾವುದೇ ಕ್ಷಣದಲ್ಲೀ  ಬಿಎಸ್ ವೈ ಬಂಧನ ಸಾಧ್ಯತೆ ಇದೆ.

ಇನ್ನು ಪ್ರಕರಣ ರದ್ದು ಕೋರಿ ಬಿಎಸ್ ಯಡಿಯೂರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

Key words: Court, non-bailable warrant, BS Yeddyurappa