ರೋಹಿಣಿ ಸಿಂಧೂರಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಡಿ.ರೂಪಾಗೆ ಕೋರ್ಟ್ ನಿರ್ಬಂಧ.

ಬೆಂಗಳೂರು,ಫೆಬ್ರವರಿ,23,2023(www.justkannada.in):  ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಐಪಿಎಸ್ ಅಧಿಕಾರಿ ಡಿ.ರೂಪಾ ಸೇರಿದಂತೆ ಎಲ್ಲಾ ಪ್ರತಿವಾದಿಗಳಿಗೆ ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್ ನಿರ್ಬಂಧ ವಿಧಿಸಿದೆ.

ಮಾನಹಾನಿಕರ ಹೇಳಿಕೆ ನೀಡದಂತೆ ನಿರ್ಬಂಧ ಕೋರಿ  ರೋಹಿಣಿ ಸಿಂಧೂರಿ ಅವರು ಸಿಟಿ ಸಿವಿಲ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ 74ನೇ ಸಿಟಿ ಸಿವಿಲ್ ಕೋರ್ಟ್  ಡಿ.ರೂಪ ಅವರಿಗೆ ನೋಟಿಸ್ ನೀಡಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ.

ಅಲ್ಲದೆ ರೋಹಿಣಿ ಸಿಂಧೂರಿ ವಿರುದ್ಧ ಮಾನಿಹಾನಿಕರ ಹೇಳಿಕೆ ನೀಡದಂತೆ ಎಲ್ಲಾ ಪ್ರತಿವಾದಿಗಳಿಗೆ ನಿರ್ಬಂಧ ವಿಧಿಸಿದೆ.  ಹಾಗೆಯೇ ಎಲ್ಲಾ ಪ್ರತಿವಾದಿಗಳಿಗೂ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಯನ್ನ ಮಾರ್ಚ್ 7ಕ್ಕೆ ಮುಂದೂಡಿದೆ.

Key words: Court -restrains – D. Rupa – defamatory- statements –against- Rohini Sindhuri.