ಕೋವಿಡ್ -19: ಸಿಎಂ ಬಿಎಸ್ ವೈ ನೇತೃತ್ವದಲ್ಲಿ ಇಂದು ಎರಡು ಸಭೆ.

ಬೆಂಗಳೂರು,ಜೂ,2,2021(www.justkannada.in): ರಾಜ್ಯದಲ್ಲಿ ಕೊರೊನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಲಾಕ್ ಡೌನ್ ಜಾರಿ ಮಾಡಲಾಗಿದೆ. ಈ ಮಧ್ಯೆ ಕೊರೋನಾ ನಿರ್ವಹಣೆ ಲಾಕ್ ಡೌನ್ ಕುರಿತು ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಎರಡು ಸಭೆಗಳು ನಡೆಯಲಿವೆ.jk

ಸಂಜೆ 4 ಗಂಟೆಗೆ ತಜ್ಞರ ಜತೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.  ದೇವಿಶೆಟ್ಟಿ ನೇತೃತ್ವದ ಸಮಿತಿಯ ಜತೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಲಿದ್ದು, ಕೋವಿಡ್ 3ನೇ  ಅಲೆ ತಡೆಗಟ್ಟುವಿಗೆ ಬಗ್ಗೆ ಮಕ್ಕಳ ಮೇಲೆ ಬೀರುವ ಪರಿಣಾಮದ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಹಾಗೆಯೇ ಸಂಜೆ 6ಗಂಟೆಗೆ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿರುವ ಸಿಎಂ ಬಿಎಸ್ ಯಡಿಯೂರಪ್ಪ ಲಾಕ್ ಡೌನ್ ವಿಸ್ತರಣೆ ಕುರಿತು ಚರ್ಚೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.

Key words: Covid-19-Two meeting – CM BS yeddyurappa