Tuesday, August 4, 2026

BDA Apartments

Home Front Page ಕೋವಿಡ್ ಭೀತಿ ಹಿನ್ನೆಲೆ: ತಲಪಾಡಿ ಗಡಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಭೇಟಿ, ಪರಿಶೀಲನೆ

ಕೋವಿಡ್ ಭೀತಿ ಹಿನ್ನೆಲೆ: ತಲಪಾಡಿ ಗಡಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಭೇಟಿ, ಪರಿಶೀಲನೆ

ಮಂಗಳೂರು,ಜುಲೈ,30,2021(www.justkannada.in):  ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ರಾಜ್ಯ ಗಡಿ ಭಾಗದ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಕೋವಿಡ್ ತಪಾಸಣೆ ಕುರಿತು ಪರಿಶೀಲಿಸಲು ಜುಲೈ 30ರ ಶುಕ್ರವಾರ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಅವರು ಗಡಿಯಲ್ಲಿ ಕೈಗೊಳ್ಳಲಾಗಿರುವ ಕೋವಿಡ್ ತಪಾಸಣಾ ಕಾರ್ಯಗಳ ಪ್ರಕ್ರಿಯೆಗಳನ್ನು ಕುಲಂಕುಶವಾಗಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತರಾದ ಶಶಿಕುಮಾರ್, ಡಿಸಿಪಿ ಹರಿರಾಂ ಶಂಕರ್, ಉಪ ವಿಭಾಗಾಧಿಕಾರಿ ಮದನ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್,  ತಹಶೀಲ್ದಾರ್ ಗುರುಪ್ರಸಾದ್, ಟಿಎಚ್ಒ ಡಾ. ಸುಜಯ್ ಭಂಡಾರಿ, ವೈದ್ಯಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Key words: covid –DC- Rajendra KV visit- Thalapady- border -inspection