ಕೋಲ್ಕತಾ ನೈಟ್ ರೈಡರ್ಸ್ ಬ್ಯಾಟ್ಸ್ಮನ್ ನ್ಯೂಜಿಲ್ಯಾಂಡ್’ನ ಟಿಮ್ ಸೀಫರ್ಟ್’ಗೆ ಕೋವಿಡ್

ಬೆಂಗಳೂರು, ಮೇ 08, 2021 (www.justkannada.in): ಕೋಲ್ಕತಾ ನೈಟ್ ರೈಡರ್ಸ್ ಬ್ಯಾಟ್ಸ್‌ಮನ್ ಟಿಮ್ ಸೀಫರ್ಟ್ ಕೋವಿಡ್ ಸೋಂಕು ದೃಢಪಟ್ಟಿದೆ.

ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಐಪಿಎಲ್’ನಲ್ಲಿ ಪಾಲ್ಗೊಂಡಿದ್ದ ನ್ಯೂಜಿಲೆಂಡ್‌ ಆಟಗಾರರೊಂದಿಗೆ ಸೀಫರ್ಟ್ ಸ್ವದೇಶಕ್ಕೆ ತೆರಳುತ್ತಿಲ್ಲ ಎಂದು ಕ್ರಿಕೆಟ್ ಮಂಡಳಿ ತಿಳಿಸಿದೆ.

ಪ್ರಸ್ತುತ ಅಹಮದಾಬಾದ್‌ನಲ್ಲಿರುವ ಸೀಫರ್ಟ್ ಅವರನ್ನು ಚೆನ್ನೈಗೆ ಸ್ಥಳಾಂತರಿಸಲಾಗುವುದು. ಅಲ್ಲಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಕ್ರಿಕೆಟ್ ಮಂಡಳಿ ಮಾಹಿತಿ ನೀಡಿದೆ.