ಸಿಎಂ ಬೊಮ್ಮಾಯಿ ಪುತ್ರ ಹಾಗೂ ಸೊಸೆಗೂ ಕೋವಿಡ್ ಪಾಸಿಟಿವ್.

ಬೆಂಗಳೂರು,ಜನವರಿ,11,2022(www.justkannada.in):  ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು ಇಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಮಧ್ಯೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಹಾಗೂ ಸೊಸೆಗೂ ಕೊರೋನಾ ಸೋಂಕು ತಗುಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಭರತ್ ಬೊಮ್ಮಾಯಿ ಟ್ವೀಟ್ ಮಾಡಿದ್ದು, ನನಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕೇವಲ ಸೂಕ್ಷ್ಮ ಲಕ್ಷಣಗಳನ್ನು ಹೊಂದಿದ್ದೇನೆ. ಇದೀಗ ಮನೆಯಲ್ಲಿಯೇ ಐಸೋಲೇಷನ್‍ನಲ್ಲಿದ್ದೇನೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ದಯವಿಟ್ಟು ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ತಿಳಿಸುತ್ತೇನೆ ಎಂದಿದ್ದಾರೆ.

ಈ ಮಧ್ಯೆ  ಸಚಿವ ಜೆ.ಸಿ ಮಾಧುಸ್ವಾಮಿ ಅವರಿಗೂ ಕೋವಿಡ್ ಸೋಂಕು ತಗುಲಿದೆ. ಸಿಎಂ ಬಸವರಾಜ ಬೊಮ್ಮಾಯಿಗೆ ಕೊರೊನಾ ದೃಢ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು. ಶೀಘ್ರ ಗುಣಮುಖರಾಗುವಂತೆ ಸಿಎಂ ಬಸವರಾಜ ಬೊಮ್ಮಾಯಿಗೆ ಸಿದ್ದರಾಮಯ್ಯ ಹಾರೈಸಿದ್ದಾರೆ.

Key words: Covid positive – CM basavaraj bommai- son