ಕಾಂಗ್ರೆಸ್ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ಧ ಇಬ್ಬರು ನಾಯಕರಿಗೆ ಕೋವಿಡ್ ಸೋಂಕು ದೃಢ

ಬೆಂಗಳೂರು,ಜನವರಿ,11,2022(www.justkannada.in):  ಮೇಕೆದಾಟು ಪಾದಯಾತ್ರೆ ಜಾರಿಗೆ ಆಗ್ರಹಿಸಿ ಸರ್ಕಾರಕ್ಕೆ ಸೆಡ್ಡು ಹೊಡೆದು ರಾಜ್ಯ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದು ವಿವಿಧ ಜಿಲ್ಲೆಗಳಿಂದ ಸಾವಿರಾರು ‘ಕೈ’ ಕಾರ್ಯಕರ್ತರು ಆಗಮಿಸಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ಈ ಮಧ್ಯೆ ಪಾದಯಾತ್ರೆಯಲ್ಲಿ ಭಾಗವಹಿಸಿದ್ಧ ಇಬ್ಬರು ಕಾಂಗ್ರೆಸ್ ಮುಖಂಡರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ.  ಹೌದು ಮಾಜಿ ಸಚಿವ ಹೆಚ್.ಎಂ ರೇವಣ್ಣ ಹಾಗೂ ಸಿಎಂ ಇಬ್ರಾಹಿಂ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ರಾಜ್ಯದಲ್ಲಿ ಕೋರೋನಾ ಹೆಚ್ಚುತ್ತಿದ್ದು ಸದ್ಯ ರಾಜ್ಯದಲ್ಲಿ ಸರ್ಕಾರ ಕಠಿಣ ನಿಯಮ ಜಾರಿಗೊಳಿಸಿದೆ. ಆದರೆ ಪಾದಯಾತ್ರೆ ತಡೆಯುವ ಉದ್ದೇಶಕ್ಕಾಗಿಯೇ ಕಠಿಣ ನಿಯಮಗಳನ್ನ ಜಾರಿ ಮಾಡಿದೆ. ಹೀಗಾಗಿ ಪಾದಯಾತ್ರೆ ಮಾಡಿಯೇ ಮಾಡುತ್ತೇವೆ ಎಂದು ಸರ್ಕಾರಕ್ಕೆ ಸವಾಲು ಹಾಕಿ ಕಾಂಗ್ರೆಸ್ ನಾಯಕರು ಪಾದಯಾತ್ರೆ ನಡೆಸುತ್ತಿದ್ದಾರೆ. ಈ ಮಧ್ಯೆ ಭಾನುವಾರ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ ಎಚ್ ಎಮ್ ರೇವಣ್ಣ ಹಾಗೂ ಸಿಎಂ ಇಬ್ರಾಹಿಂ ಅವರಿಗೆ  ಕೊರೊನಾ ಸೋಂಕು ತಗುಲಿದೆ. ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವಣ್ಣಗೆ ಚಿಕಿತ್ಸೆ ನೀಡಲಾಗುತ್ತಿದೆ.

Key words: covid positive-two –congress-leader