ಬೆಂಗಳೂರು,ಜನವರಿ,1,2025 (www.justkannada.in): ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಸರ್ಕಾರಕ್ಕೆ ಸಲ್ಲಿಸಿದ್ದಾರೆ.
ಮೈಕೆಲ್ ಡಿ ಕುನ್ಹಾ ಅವರು ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಕೋವಿಡ್ ಹಗರಣ ಸಂಬಂಧ ಅಂತಿಮ ವರದಿ ಸಲ್ಲಿಸಿದ್ದಾರೆ.
ಕೋವಿಡ್ ವೇಳೆ, ಔಷಧ ಮತ್ತು ಉಪಕರಣಗಳ ಖರೀದಿಯಲ್ಲಿನ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಈ ಕುರಿತು ತನಿಖೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 2023ರಲ್ಲಿ ಆದೇಶಿಸಿತ್ತು. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿತ್ತು.
ಈ ಬಗ್ಗೆ ತನಿಖೆ ನಡೆಸಿದ್ದ ಆಯೋಗ 2024ರ ಆಗಸ್ಟ್ ವೇಳೆಗೆ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಕೆ ಮಾಡಿತ್ತು. ಈಗ ತನಿಖೆಯ ಅಂತಿಮ ವರದಿ ಸಲ್ಲಿಸಿದೆ. ಆಯೋಗವು ತನಿಖಾ ವರದಿಗಳನ್ನು ಸಾರ್ವಜನಕವಾಗಿ ಬಿಡುಗಡೆ ಮಾಡಿಲ್ಲ. ಸಾರ್ವಜನಿಕ ಹಿತಾಸಕ್ತಿಗಾಗಿ ವರದಿ ಬಹಿರಂಗಗೊಳಿಸದಂತೆ ರಾಜ್ಯ ಸರ್ಕಾರಕ್ಕೆ ಮೈಕೆಲ್ ಡಿ.ಕುನ್ಹಾ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
Key words: Covid scam, Final report, submitted, government







